ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತ ಸೇವಾದಳ, ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಭಾರತ ಸೇವಾದಳ ಉಡುಪಿ ಜಿಲ್ಲಾ ಸಮಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಶ್ರೀ ಶಾರದ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ಬಸ್ರೂರು ಸಹಯೋಗದೊಂದಿಗೆ ಸೇವಾದಳ ಸಂಸ್ಥಾಪನ ಶತಮಾನೋತ್ಸವದ ಪ್ರಯುಕ್ತ ಭಾರತ ಸೇವಾದಳ ಕುಂದಾಪುರ ತಾಲೂಕು ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳವನ್ನು ಗುರುವಾರ ಶಾರದ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಮಾತನಾಡಿ, ದೇಶಾಭಿಮಾನ ಶಿಸ್ತು ಸೇವಾ ಮನೋಭಾವನೆ ಹಾಗೂ ರಾಷ್ಟ್ರಧ್ವಜ ರಾಷ್ಟ್ರಗೀತೆ ಕುರಿತವಾದ ತರಬೇತಿ ನೀಡುತ್ತಿರುವ ಭಾರತ ಸೇವಾದಳ ಕಾರ್ಯ ಶ್ಲಾಘನೀಯ ಎಂದರು.
ದೇಶದ ಸೇವೆಗಾಗಿ ಹುಟ್ಟಿಕೊಂಡಿರುವ ಸೇವಾದಳ ಶಿಸ್ತು ತಾಳ್ಮೆ ಸೇವಾ ಮನೋಭಾವದಿಂದ ಬಲಿಷ್ಠ ಸಂಸ್ಥೆಯಾಗಿ ಬೆಳೆದಿದೆ, ಇಂದಿನ ಮಕ್ಕಳು ಅತ್ಯುತ್ತಮ ಕಲಿಕೆ ಮೂಲಕ ಆಧುನಿಕತೆಯನ್ನು ಮೈಗೂಡಿಸಿಕೊಂಡಿದ್ದಾರೆ, ಸೇವಾ ದಳದ ಮೂಲಕ ದೇಶಪ್ರೇಮ ಭಕ್ತಿ ಸೇವೆ ಮನೋಭಾವನೆ ಮೂಡಿಸಿದರೆ ಉತ್ತಮ ನಾಗರಿಕರಾಗಿ ಬೆಳೆಯಲು ಸಾಧ್ಯ ಎಂದರು.
ಕಾರ್ಯಕ್ರಮವನ್ನು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬಿ. ಅಪ್ಪಣ್ಣ ಹೆಗ್ಡ ಅವರು ನೆರವೇರಿಸಿ ಶುಭಹಾರೈಸಿದರು.
ಬಸ್ರೂರು ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಬೇಲೂರು ದಿನಕರ ಶೆಟ್ಟಿ ರಾಷ್ಟ್ರ ಧ್ವಜಾರೋಹಣಗೈದರು.
ಭಾರತ್ ಸೇವಾದಳ ಕೇಂದ್ರ ಸಮಿತಿ ಆರೂರು ತಿಮ್ಮಪ್ಪ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನನಾಡಿದರು. ಅತಿಥಿ ಅಭ್ಯಾಗತರು ಉಪಸ್ಥಿತರಿದ್ದರು.