ಮಂಗಳೂರು ವಿವಿ 102 ಕ್ರೀಡಾಪಟುಗಳ ಪೈಕಿ 82 ವಿದ್ಯಾರ್ಥಿಗಳು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ:
ಮಹಿಳೆಯರ ಹಾಗೂ ಪುರುಷರ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಹಾಗೂ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಖೋ ಖೋ ಚಾಂಪಿಯನ್ಶಿಪ್ನಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸುವ 102 ಕ್ರೀಡಾಪಟುಗಳಿಗೆ ಆಳ್ವಾಸ್ ಕಾಲೇಜಿನಲ್ಲಿ ಜರ್ಸಿ ವಿತರಿಸಲಾಯಿತು. ಅಥ್ಲೆಟಿಕ್ಸ್ 72ರ ಪೈಕಿ 59 ಹಾಗೂ ಖೋ ಖೋ 30ರ ಪೈಕಿ 23 ಸೇರಿದಂತೆ 82 ಕ್ರೀಡಾಪಟುಗಳು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು.

Call us

Click Here

ತಮಿಳುನಾಡಿನಲ್ಲಿ ನಡೆಯಲಿರುವ ಪುರುಷರ ರಾಷ್ಟಿçÃಯ ಮಟ್ಟದ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಮಂಗಳೂರು ವಿಶ್ವವಿದ್ಯಾಲಯದ 39 ಸ್ಪರ್ಧಿಗಳು ಪಾಲ್ಗೊಳ್ಳಲಿದ್ದು, ಈ ಪೈಕಿ 33 ಮಂದಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು. ಒಡಿಶಾದಲ್ಲಿ ನಡೆಯಲಿರುವ ಮಹಿಳೆಯರ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಮಂಗಳೂರು ವಿಶ್ವವಿದ್ಯಾಲಯದ 33 ವಿದ್ಯಾರ್ಥಿನಿಯರು ಪಾಲ್ಗೊಳ್ಳಲಿದ್ದು, 26 ಮಂದಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯರು.

ಪುರುಷರ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಖೋ ಖೋ ಚಾಂಪಿಯನ್ಶಿಪ್ ಕೇರಳದ ಕಲ್ಲಿಕೋಟೆಯಲ್ಲಿ ನಡೆಯಲಿದ್ದು, ಮಂಗಳೂರು ವಿಶ್ವವಿದ್ಯಾಲಯ ತಂಡದ 15 ಆಟಗಾರರಲ್ಲಿ 12 ಮಂದಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು. ಮಹಿಳೆಯರ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಖೋ ಖೋ ಚಾಂಪಿಯನ್ಶಿಪ್ ಕೇರಳದ ತಿರುವನಂತಪುರ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ನಡೆಯಲಿದ್ದು, ಮಂಗಳೂರು ವಿಶ್ವವಿದ್ಯಾಲಯ ತಂಡದ 15 ಆಟಗಾರರಲ್ಲಿ 11 ಮಂದಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯರು.

ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ ಜೆರಾಲ್ಡ್ ಸಂತೋಷ ಡಿಸೋಜ, ಮಂಗಳೂರು ವಿವಿಯ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಡಾ. ಪ್ರಸನ್ನ, ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಮಧು ಜಿ.ಆರ್., ಅಥ್ಲೆಟಿಕ್ಸ್ ಪುರುಷರ ತಂಡದ ತರಬೇತುದಾರ ಡಾ ರಾಧಾಕೃಷ್ಣ ಹೆಚ್, ಆಳ್ವಾಸ್ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕರಾದ ಅವಿನ್ ಕುಮಾರ್, ತಿಲಕ್ಕುಮಾರ್ ಇನ್ನಿತರರು ಇದ್ದರು.

ಸ್ಪರ್ಧಿಸುವ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

Click here

Click here

Click here

Click Here

Call us

Call us

Leave a Reply