ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿದ್ಯಾರ್ಥಿಗಳ ಸಾಹಿತ್ಯಾಸಕ್ತಿ ಅವರಲ್ಲಿ ಭಿನ್ನ ಯೋಚನೆಗಳನ್ನು ಹುಟ್ಟುಹಾಕುತ್ತದೆ. ಅವುಗಳಿಗೆ ವೇದಿಕೆ ದೊರೆತಾಗ ಇನ್ನಷ್ಟು ಪುಷ್ಠಿ ದೊರೆಯುತ್ತದೆ. ಈ ವೇದಿಕೆ ನೀಡಿದ ಅನುಭವ ಮುಖ್ಯವೇ ಹೊರತು ಬಹುಮಾನಗಳಲ್ಲ. ಸ್ಪರ್ಧೆಯ ಆಯೋಜನೆ, ಸ್ಪರ್ಧಾಳುಗಳ ಕ್ರಿಯಾಶೀಲ ಭಾಗವಹಿಸುವಿಕೆ ಇದು ಕಾರ್ಯಕ್ರಮದ ಯಶಸ್ಸು ಎಂದು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ| ಎನ್. ಪಿ. ನಾರಾಯಣ ಶೆಟ್ಟಿ ಹೇಳಿದರು.
ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ಜಂಟಿ ಆಶ್ರಯದಲ್ಲಿ ಆಯೋಜಿಸಿದ ವಿಶ್ವವಿದ್ಯಾನಿಲಯ ಮಟ್ಟದ ಅಂತರ್-ಕಾಲೇಜು ಸಾಹಿತ್ಯ ಸ್ಪರ್ಧೆಯ ಬಹುಮಾನ ವಿತರಿಸಿ ಮಾತನಾಡಿದರು.
ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕ ಡಾ| ಗಣೇಶ್ ಸಂಜೀವ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಉಪಸ್ಥಿತರಿದ್ದರು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ನಿರ್ವಹಣಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರವೀಣ್ ಮೊಗವೀರ ಅತಿಥಿಗಳನ್ನು ಪರಿಚಯಿಸಿದರು.
ಕಾರ್ಯಕ್ರಮದ ಸಂಯೋಜಕಿ ರೇಷ್ಮಾ ಶೆಟ್ಟಿ ವಂದಿಸಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಮತ್ತು ಐಕ್ಯೂಎಸಿ ಸಂಯೋಜಕಿ ದೀಪಿಕಾ ಜಿ. ಬಹುಮಾನಿತರ ಪಟ್ಟಿ ವಾಚಿಸಿದರು. ವಾಣಿಜ್ಯ ವಿಭಾಗದ ಪ್ರಾಧ್ಯಾ ಸುಧೀರ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಸೈಂಟ್ ಅಲೋಶಿಯಸ್ ಕಾಲೇಜು, ಮಂಗಳೂರು, ಕೆನರಾ ಕಾಲೇಜು, ಮಂಗಳೂರು, ಗೋವಿಂದ ದಾಸ್ ಕಾಲೇಜು, ಸುರತ್ಕಲ್ ಬಹುಮಾನಗಳನ್ನು ಪಡೆದರು.