ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಮುಗ್ಧ ಮಗುವಿನಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಹೊರ ಹೊಮ್ಮಿಸಿ ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ಪಾಲಕರ, ಶಿಕ್ಷಕರ ಮತ್ತು ಸಮುದಾಯದ ಪಾತ್ರ ಹಿರಿದಾಗಿದೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿವೇಕ ಕೊಠಡಿಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಶಾಲೆಗಳಲ್ಲಿನ ಕೊಠಡಿಗಳ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಸರಕಾರ ಶಾಲೆಗಳಲ್ಲಿ ವಿವೇಕ ಕೊಠಡಿಗಳನ್ನು ನಿರ್ಮಿಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟಿದೆ. ಈ ಶಾಲೆಯಲ್ಲಿ ಸುಮಾರು ೧೩ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವಿವೇಕ ಕೊಠಡಿಯ ಸದುಪಯೋಗ ಆಗಬೇಕು ಎಂದರು.
ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ನಾರಾಯಣ ಕೆ. ಗುಜ್ಜಾಡಿ, ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಮ್ಮಯ್ಯ ದೇವಾಡಿಗ, ಗ್ರಾಮ ಪಂಚಾಯತ್ ಸದಸ್ಯ ಹರೀಶ ಮೇಸ್ತ, ಉದ್ಯಮಿಗಳಾದ ಉಮೇಶ್ ಎಲ್.ಮೇಸ್ತ ಗುಜ್ಜಾಡಿ, ದಯಾಕರ ಮೇಸ್ತ ಗುಜ್ಜಾಡಿ, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್, ಎಸ್ಡಿಎಂಸಿ ಉಪಾಧ್ಯಕ್ಷೆ ಗಾಯತ್ರಿ ಕೊಡಂಚ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ವಿನಾಯಕ ಪೈ, ಶಾಲೆಯ ಹಳೆ ವಿದ್ಯಾರ್ಥಿ ನಾಗೇಶ ಕೊಡಂಚ, ಶಾಲೆಯ ಮುಖ್ಯ ಶಿಕ್ಷಕ ಗಂಗಾಧರ ಆರ್.ಬಂಟ್, ಎಸ್ಡಿಎಂಸಿ ಸಮನ್ವಯ ವೇದಿಕೆ ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು, ಶಾಲಾ ವಿದ್ಯಾರ್ಥಿ ನಾಯಕ ಕೋಮಲ್ ಡಿ., ಗುಜ್ಜಾಡಿ ಗ್ರಾಪಂ ಸದಸ್ಯರು, ಶಾಲೆಯ ಎಸ್ಡಿಎಂಸಿ ಸದಸ್ಯರು, ಸಹಶಿಕ್ಷಕರು, ಮೊದಲಾದವರು ಉಪಸ್ಥಿತರಿದ್ದರು. ಉಪಸ್ಥಿತರಿದ್ದರು.