ಮದರ್ ತೆರಸಾ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ಳಿ ಹಬ್ಬದ ಸಂಭ್ರಮ ಉದ್ಘಾಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಶಂಕರನಾರಾಯಣದ ಮದರ್ ತೆರೆಸಾ ಶಿಕ್ಷಣ ಸಂಸ್ಥೆ ಇಲ್ಲಿ 25 ವರ್ಷಗಳ ಸಂವತ್ಸರಗಳನ್ನ ಅಂಗವಾಗಿ ಆಯೋಜಿಸಲಾದ ರೌಪ್ಯೋತ್ಸವದ ಉದ್ಘಾಟನಾ ಸಮಾರಂಭವವು ಅದ್ದೂರಿಯಾಗಿ ನೆರವೇರಿತು.

Call us

Click Here

ಸಮಾರಂಭವನ್ನು ಉದ್ಘಾಟಿಸಿದ ಉದ್ಯಮಿ ಹಾಗೂ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ಎಚ್.ಎಸ್. ಶೆಟ್ಟಿ ಅವರು ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ 25 ವರ್ಷಗಳ ಪ್ರಗತಿಯನ್ನು ಕೊಂಡಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ನಿವೃತ್ತ ಲೋಕಾಯುಕ್ತರಾದ ಎನ್. ಸಂತೋಷ ಹೆಗ್ಡೆ ಅವರು ಮಾತನಾಡಿ ನಮ್ಮ ಸಮಾಜದಲ್ಲಿ ತುಂಬಿಕೊಂಡಿರುವ ಭ್ರಷ್ಟಾಚಾರ, ಅನ್ಯಾಯ, ಅಧರ್ಮ, ಮೋಸ,ವಂಚನೆಗಳ ಬಗ್ಗೆ ಖೇದವನ್ನು ವ್ಯಕ್ತಪಡಿಸುತ್ತಾ ಪೋಷಕರು ತಮ್ಮ ಮಕ್ಕಳಿಗೆ ಕೇವಲ ಶಿಕ್ಷಣವನ್ನು ನೀಡಿದರೆ ಸಾಲದು ಮಕ್ಕಳಲ್ಲಿ ಒಳ್ಳೆಯ ಗುಣಗಳನ್ನು ಬಿತ್ತಿ ಮಾನವರಂತೆ ಬದುಕುವ ಕಲೆಯನ್ನು ಕಲಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪ್ರಾಚಾರ್ಯದ್ವಯರು ಏಳುಬೀಳುಗಳ ಬಗ್ಗೆ ಮಾತನಾಡುತ್ತಾ ಇಪ್ಪತ್ತೈದು ವರ್ಷಗಳ ಪ್ರಯಾಣದಲ್ಲಿ ತಮ್ಮೊಂದಿಗೆ ಕೈಜೋಡಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಅರ್ಪಿಸಿದರು.

ರೌಪ್ಯೋತ್ಸವ ಸಮಾರಂಭದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Click here

Click here

Click here

Click Here

Call us

Call us

ಕಾರ್ಯಕ್ರಮದಲ್ಲಿ ಅತಿಥಿಗಳನ್ನ ಉಪನ್ಯಾಸಕಿ ವೈಶಾಲಿ ಶೆಟ್ಟಿ ಸ್ವಾಗತಿಸಿದರೆ ಗೀತಾ ಧನ್ಯವಾದ ಸಮರ್ಪಿಸಿದರು. ಇಂಗ್ಲೀಷ್ ಉಪನ್ಯಾಸಕರಾದ ರಾಮ್ ಭಟ್ ಸಜಂಗದ್ದೆ ಕಾರ್ಯಕ್ರಮವನ್ನು ನಿರೂಪಿಸಿದರು.

ಸಭಾ ಕಾರ್ಯಕ್ರಮದ ತರುವಾಯ ವಿದ್ಯಾರ್ಥಿಗಳಿಂದ ವಿವಿಧ ವೈವಿಧ್ಯಮಯ ಮನೋರಂಜನ ಕಾರ್ಯಕ್ರಮಗಳು ನಡೆದವು.

Leave a Reply