ಸಿಎ ಪರೀಕ್ಷೆಯಲ್ಲಿ ಕುಂದಾಪುರ ಶಿಕ್ಷ ಪ್ರಭ ಅಕಾಡೆಮಿ ವಿದ್ಯಾರ್ಥಿಗಳ ಸಾಧನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕುಂದಾಪುರದ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ (ಸ್ಪೇಸ್) ನ ವಿದ್ಯಾರ್ಥಿಗಳು ಇನ್ಸ್ಟಿಟೂಟ್ ಆಫ್ ಚಾರ್ಟಡ್ ಅಕೌಂಟೆಂಟ್ಸ್ ಆಫ್ ಇಂಡಿಯ ನವೆಂಬರ್ ನಡೆಸಿದ ಸಿಎ ಫೈನಲ್ ಮತ್ತು ಸಿಎ ಇಂಟರ್ಮೀಡಿಯೆಟ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ.

Call us

Click Here

ಸಂಸ್ಥೆಯ ವಿದ್ಯಾರ್ಥಿಯಾದ ಷಣ್ಮುಖ ಕೆ. ಎಸ್.(256) ಸಿಎ ಅಂತಿಮ ಪರೀಕ್ಷೆಯನ್ನು ತೇರ್ಗಡೆ ಹೊಂದಿ ಲೆಕ್ಕಪರಿಶೋಧಕರಾಗಿ ಹೊರಹೊಮ್ಮಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಯಾದ ಧನುಷ್ 518 ಅಂಕಗಳೊಂದಿಗೆ ಸಿಎ ಇಂಟರ್ಮೀಡಿಯಟ್ ಎರಡು ಹಂತದ ಪರೀಕ್ಷೆಯನ್ನು ಮೊದಲ ಪ್ರಯತ್ನದಲ್ಲೇ ತೇರ್ಗಡೆ ಹೊಂದುವುದರ ಮೂಲಕ ಸಂಸ್ಥೆಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಆಯೆಷಾ ತುಬಾ(260), ವೈಷ್ಣವಿ ಶೆಟ್ಟಿ (249), ಅಮೃತ (234), ಕೆ.ಆರ್.‌ ದೀಕ್ಷಾ (228) ಅಂಕಗಳೊಂದಿಗೆ ಸಿಎ ಇಂಟರ್ಮೀಡಿಯೆಟ್ ದ್ವಿತೀಯ ಗ್ರೂಪ್ ಪರೀಕ್ಷೆಯನ್ನು ತೇರ್ಗಡೆ ಹೊಂದುದರ ಮೂಲಕ ಸಿಎ ಅಂತಿಮ ಹಂತಕ್ಕೆ ಪ್ರವೇಶ ಪಡೆದಿದ್ದಾರೆ. ಶೃದ್ಧಾ ಬಿ. ಸಾಲ್ಯಾನ್(270)‌, ಪಂಚಮಿ ಕಿಣಿ (261), ರಕ್ಷಿತಾ (235), ಸುದೀಪ್‌ರಾಜ್(227)‌, ಕಿಶನ್‌ ಅಡಿಗ (216), ವೈಷ್ಣವಿ ವಿ. ಮೊಪಗಾರ್‌ (216), ರೋಹಿತ್‌ ಆಚಾರ್ಯ(210), ಸುಶ್ಮಿತಾ ಉದಯ್‌ ಪೂಜಾರಿ (203), ಮತ್ತು ಶ್ರೀಜಿತ್ (200) ಅಂಕಗಳೊಂದಿಗೆ ಸಿಎ ಇಂಟರ್ಮೀಡಿಯಟ್ ಮೊದಲ ಗ್ರೂಪ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸಂಸ್ಥೆಯ ಮುಖ್ಯಸ್ಥರಾದ ಪ್ರತಾಪ್‌ಚಂದ್ರ ಶೆಟ್ಟಿ ಮತ್ತು ಭರತ್ ಶೆಟ್ಟಿಯವರು ಅಭಿನಂದಿಸಿದ್ದಾರೆ.

Leave a Reply