ಕುಂದಾಪುರ: ಇಲ್ಲಿನ ನೃತ್ಯ ವಸಂತ ನಾಟ್ಯಾಲಯ ವತಿಯಿಂದ ದಶಾರ್ಪಣಂ ರಾಜ್ಯಮಟ್ಟದ ಭರತನಾಟ್ಯ ಸ್ಪರ್ಧೆ ನವಂಬರ್ ೮ರಂದು ಬೆಳಿಗ್ಗೆ ೯ಕ್ಕೆ ಹಂಗಳೂರಿನ ಅನಂತಪದ್ಮನಾಭ ಸಭಾಗೃಹದಲ್ಲಿ ನಡೆಯಲಿದೆ. ಭರತನಾಟ್ಯ ಅತೀ ಕಿರಿಯ ವಿಭಾಗ, ಕಿರಿಯ ವಿಭಾಗ ಹಿರಿಯ ವಿಭಾಗ ಎಂಬ ಮೂರು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ನೋಂದಣಿಗೆ ನವಂಬರ್ ೪ ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ 9845497206, 9448487789ಗೆ ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
ಸುನಿಲ್ ಹೆಚ್. ಜಿ. ಬೈಂದೂರು
ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.




