Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಳ್ತೂರು ಚಿತ್ತೇರಿ ದೈವಸ್ಥಾನದ ಎದುರು ವೀರಸ್ಥಂಭ ಪತ್ತೆ
    ಊರ್ಮನೆ ಸಮಾಚಾರ

    ಉಳ್ತೂರು ಚಿತ್ತೇರಿ ದೈವಸ್ಥಾನದ ಎದುರು ವೀರಸ್ಥಂಭ ಪತ್ತೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ಉಳ್ತೂರು – ಚಿತ್ತೇರಿಯ ನಂದಿಕೇಶ್ವರ ದೈವಸ್ಥಾನದ ಎದುರು ಅತ್ಯಂತ ಅಪರೂಪದ ವೀರಸ್ಥಂಭ ಕಂಡು ಬಂದಿದೆ. ಈ ವೀರಸ್ಥಂಭ ಚಿತ್ತೇರಿ ನಂದಿಕೇಶ್ವರ ದೈವಸ್ಥಾನದ ಎದುರು ನಿಲ್ಲಿಸಲ್ಪಟ್ಟಿದ್ದು, ಸುಮಾರು ಆರು ಅಡಿ ಎತ್ತರವಿದೆ. ನಾಲ್ಕು ಮುಖಗಳನ್ನು ಹೊಂದಿರುವ ಸ್ಥಂಭ, ಪ್ರತಿಯೊಂದು ಮುಖದಲ್ಲಿಯೂ ತಲಾ ಮೂರು ಚಿತ್ರಪಟ್ಟಿಕೆಗಳನ್ನು ಒಳಗೊಂಡಿದೆ.

    Click Here

    Call us

    Click Here

    ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ನಿವೃತ್ತ ಪುರಾತತ್ತ್ವ ವಿದ್ವಾಂಸ ಪ್ರೊ. ಟಿ. ಮುರುಗೇಶಿ ಅವರು, ಪೂರ್ವಾಭಿಮುಖದ ಕೆಳಗಿನ ಪಟ್ಟಿಕೆಯಲ್ಲಿ, ವೀರನೊಬ್ಬ ಅಶ್ವರೋಹಿಯ ಮೇಲೆ ದಾಳಿ ಮಾಡಿದ್ದು, ಅಶ್ವಾರೋಹಿಯನ್ನು ಎರಡು ಭಾಗವಾಗಿ ತುಂಡರಿಸಿದ್ದಾನೆ. ಎರಡನೇ ಪಟ್ಟಿಕೆಯಲ್ಲಿ ವೀರನೊಬ್ಬ ಯುದ್ಧಾನೆಯ ಮೇಲೆ ಅಂಕುಶವನ್ನು ಹಿಡಿದು ಕುಳಿತಿರುವಂತೆ ಚಿತ್ರಿಸಲಾಗಿದೆ. ಮೇಲಿನ ಪಟ್ಟಿಗೆಯಲ್ಲಿ ಕತ್ತಿ ಕಾಳಗದಲ್ಲಿ ತೊಡಗಿರುವಂತೆ ಚಿತ್ರಿಸಲಾಗಿದೆ ಎಂದು ತಿಳಿಸಿದ್ದಾರೆ.

    ಪಶ್ಚಿಮಾಭಿಮುಖದ ಕೆಳಗಿನ ಪಟ್ಟಿಕೆಯಲ್ಲಿ, ಕತ್ತ ಕಾಳಗದ ಚಿತ್ರಣವಿದೆ. ಮಧ್ಯದ ಪಟ್ಟಿಕೆಯಲ್ಲಿ ಕುದುರೆಯ ಮೇಲೆ ಕುಳಿತು ಈಟಿಯನ್ನು ಹಿಡಿದು ಮುನ್ನುಗ್ಗುತ್ತಿರುವಂತೆ ಚಿತ್ರಿಸಲಾಗಿದೆ. ಮೂರನೇ ಪಟ್ಟಿಕೆಯಲ್ಲಿ ಮತ್ತೆ ಕತ್ತಿ ಕಾಳಗದ ಚಿತ್ರಣವಿದೆ.

    ದಕ್ಷಿಣಾಭಿಮುಖದ ಕೆಳಗಿನ ಪಟ್ಟಿಕೆಯಲ್ಲಿ ಇಬ್ಬರು ವೀರರು ಕತ್ತಿಕಾಳಗದಲ್ಲಿ ನಿರತರಾಗಿದ್ದು ಓರ್ವ ಮೃತ ಸೈನಿಕನ ಶರೀರ ಕೆಳಗೆ ಬೀಳುವ ಸ್ಥಿಯಲ್ಲಿ ಇದ್ದರೆ, ದೇಹದಿಂದ ಬೇರ್ಪಟ್ಟ ತಲೆಯನ್ನು ಬಲಭಾಗದ ವೀರನ ಹಿಂಭಾಗದಲ್ಲಿ ಚಿತ್ರಿಸಲಾಗಿದೆ. ಎರಡನೇ ಪಟ್ಟಿಕೆಯಲ್ಲಿ ಕತ್ತಿಕಾಳಗದ ಚಿತ್ರಣವಿದೆ, ಮೇಲಿನ ಪಟ್ಟಿಕೆಯಲ್ಲಿ ಮೂವರು ವೀರರ ಚಿತ್ರಣವಿದ್ದು, ಇಬ್ಬರು ತಮ್ಮ ಎಡಗೈಯಲ್ಲಿ ಖಡ್ಗವನ್ನು ಎತ್ತಿ ಹಿಡಿದಿದ್ದಾರೆ, ಮೂರನೇ ವ್ಯಕ್ತಿ ತನ್ನ ಎರಡೂ ಕೈಜೋಡಿಸಿ ಅಂಜಲೀಬದ್ಧನಾಗಿ ನಿಂತಿರುವಂತೆ ಚಿತ್ರಿಸಲಾಗಿದೆ.

    ಉತ್ತರಾಭಿಮುಖದ ಕೆಳಗಿನ ಪಟ್ಟಿಕೆಯಲ್ಲಿ ಸ್ವರ್ಗದಿಂದ ಇಳಿದು ಬರುತ್ತಿರುವ ಇಬ್ಬರು ಅಪ್ಸರೆಯರ ಕಾಲುಗಳು ಮೇಲ್ಮುಖವಾಗಿ ಗಾಳಿಯಲ್ಲಿ ತೇಲುತ್ತಿವೆ, ಮೃತವೀರನ ಭುಜವನ್ನು ಹಿಡಿದುಕೊಂಡಿದ್ದಾರೆ. ಎರಡನೇ ಪಟ್ಟಿಕೆಯಲ್ಲಿ ಅಪ್ಸರೆಯರು ತಮ್ಮ ಕಾಲುಗಳಿಂದ ವೀರನ ಕಾಲ್ಗಳನ್ನು ಬಳಸಿ ಹಿಡಿದು ಆತನ ಎರಡೂ ಕೈಗಳನ್ನು ತಮ್ಮ ಭುಜದ ಮೇಲೆ ಹಾಕಿಕೊಂಡು, ಎಡ-ಬಲದ ತಮ್ಮ ಒಂದೊಂದು ಕೈಯನ್ನು ಆಕಾಶದೆಡೆಗೆ ಎತ್ತಿ ತಮ್ಮ ಸ್ವರ್ಗದ ಕಡೆಗಿನ ಪಯಣವನ್ನು ಸಾಂಕೇತಿಕವಾಗಿ ಬಿಂಬಿಸಿದ್ದಾರೆ. ಕೊನೆಯ ಪಟ್ಟಿಕೆಯಲ್ಲಿ ಮೃತ ವೀರನು ವೀರಸ್ವರ್ಗ ಪಡೆದ ದ್ಯೋತಕವಾಗಿ ಒಂದು ಶಿವಲಿಂಗದ ಎದುರು ಕುಳಿತಿರುವಂತೆ ಚಿತ್ರಿಸಲಾಗಿದೆ.

    Click here

    Click here

    Click here

    Click Here

    Call us

    Call us

    ವೀರಸ್ಥಂಭದ ಮಹತ್ವ :
    ಮೃತ ವೀರರಿಗಾಗಿ ವೀರಗಲ್ಲುಗಳನ್ನು ನೆಡುವುದು ಸಾಮಾನ್ಯ ಪರಂಪರೆ, ಆದರೆ, ವೀರಸ್ಥಂಭವನ್ನು ನಿಲ್ಲಿಸುವುದು ವಿರಳಾತಿ ವಿರಳ ಸಂಗತಿಯಾಗಿದೆ. ಚಿತ್ರಪಟ್ಟಿಕೆಗಳಲ್ಲಿ ವಿವಿಧ ರೀತಿಯ ಯುದ್ಧದ ದೃಶ್ಯಗಳನ್ನು ಚಿತ್ರಿಸಿ, ಕೊನೆಗೆ ಆತ ಕೈಲಾಸವಾಸಿಯಾದ ಎಂಬುದನ್ನು ಚಿತ್ರಿಸಿರುವುದನ್ನು ನೋಡಿದರೆ, ಮೃತ ವ್ಯಕ್ತಿ ಸಾದಾರಣ ಸೈನಿಕನಾಗಿರದೆ, ರಾಜಮನೆತನಕ್ಕೆ ಸೇರಿದ ವ್ಯಕ್ತಿ ಎಂದು ಕಂಡು ಬರುತ್ತದೆ. ಇಂತಹ ವೀರಸ್ಥಂಭಗಳು ಕಾಸರಗೋಡಿನ ಕೂಡ್ಲು ಗೋಪಾಲಕೃಷ್ಣ ದೇವಾಲಯದ ಹೊರ ಆವರಣದಲ್ಲಿ ಒಂದು ಇದೆ ಹಾಗೂ ಮಂಗಳೂರಿನ ಅಮ್ಮುಂಜೆಯಲ್ಲಿ ಮತ್ತೊಂದಿದೆ. ಪ್ರಸ್ತುತ ಅಧ್ಯಯನದ ವೀರಸ್ಥಂಭವನ್ನು ಸ್ಥಳೀಯವಾಗಿ ಕ್ಷೇತ್ರಪಾಲ ಕಲ್ಲು ಎಂದು ಕರೆಯಲಾಗುತ್ತದೆ. ಇನ್ನೂ ಹೆಚ್ಚಿನ ಅಧ್ಯಯನದ ಅಗತ್ಯವಿದೆ.

    ಅಧ್ಯಯನಕ್ಕೆ ಸಹಕರಿಸಿದ ಗುಳ್ಳಾಡಿಯ ಡಾ. ರಘುರಾಮ ಶೆಟ್ಟಿಯವರ ತೀವ್ರ ಆಸಕ್ತಿಯ ಫಲವಾಗಿ ಗುಳ್ಳಾಡಿಯ ಸುತ್ತ-ಮುತ್ತ ಕೈಗೊಂಡ ಪುರಾತತ್ತ್ವ ಕ್ಷೇತ್ರಕಾರ್ಯದಿಂದಾಗಿ ಈ ಅಪೂರ್ವ ವೀರಸ್ಥಂಭ ಪತ್ತೆಯಾಗಿದೆ. ಇದಕ್ಕೆ ಪೂರಕವಾಗಿ ಸಹಕರಿಸಿz ಚಿತ್ತೇರಿ ನಂದಿಕೇಶ್ವರ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ಎಂ.ರಾಜೀವ ಶೆಟ್ಟಿ, ಬೇಳೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಜಯಶೀಲ ಶೆಟ್ಟಿ, ರಮೇಶ್ ಶೆಟ್ಟಿ, ಪ್ರದೀಪ್ ಬಸ್ರೂರು ಹಾಗೂ ನನ್ನ ವಿದ್ಯಾರ್ಥಿಗಳಿಗೆ ನಾನು ಅಭಾರಿಯಾಗಿದ್ದೇನೆ ಎಂದು ಪ್ರೊ. ಟಿ. ಮುರುಗೇಶಿ ಹೇಳಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    5 × 5 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.