ಹೊಸೂರು: ಸೈಕಲ್ ಸ್ಟ್ಯಾಂಡ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಹೊಸೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆಯ ರಜತ ಮಹೋತ್ಸವದ ಕಾರ್ಯಕ್ರಮದ ಅಂಗವಾಗಿ ನೂತನವಾಗಿ ನಿರ್ಮಿಸಿದ ಸೈಕಲ್ ಸ್ಟ್ಯಾಂಡ್ ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭ ಇತ್ತಿಚಿಗೆ ನಡೆಯಿತು,

Call us

Click Here

ಸೈಕಲ್ ಸ್ಟ್ಯಾಂಡ್ ಉದ್ಘಾಟನೆಯನ್ನು ಮಾಜಿ ಆಡಳಿತ ಮಂಡಳಿಯ ಸದಸ್ಯ ವಂಡಬಳ್ಳಿ ಜಯರಾಮ ಶೆಟ್ಟಿಯವರು ನೆರವೇರಿಸಿದರು. ಶುದ್ಧ ಕುಡಿಯುವ ನೀರಿನ ಘಟಕವನ್ನು ಮಾಜಿ ಆಡಳಿತ ಮಂಡಳಿ ಸದಸ್ಯರಾದ ಸಬ್ಲಾಡಿ ಮಂಜಯ್ಯ ಶೆಟ್ಟಿ ಮತ್ತು ಮಾಜಿ ಆಡಳಿತ ಮಂಡಳಿ ಸದಸ್ಯ ಡಾ.ಅತುಲ್ ಕುಮಾರ ಶೆಟ್ಟಿ ನೆರವೇರಿಸಿದರು,

ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ದಾನಿಗಳು ಆದ ಕೃಷ್ಣಮೂರ್ತಿ ಮಂಜರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಆಡಳಿತ ಮಂಡಳಿಯ ಸದಸ್ಯರಾದ ವಂಡಬಳ್ಳಿ ಜಯರಾಮ ಶೆಟ್ಟಿಯವರು ವಹಿಸಿದರು, ಮುಖ್ಯ ಅತಿಥಿಗಳಾಗಿ ಶಾಲಾ ಮಹಾ ಪೋಷಕರಾದ ಶಿವರಾಮ ಶೆಟ್ಟಿ ದೇವಲ್ಕುಂದ, ಚಂದ್ರಶೇಖರ್ ಶೆಟ್ಟಿ, ಕಾನ್ ಬೇರು, ದಿನಕರ ಶೆಟ್ಟಿ ನಿಡೂಟ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕೆ ಎಲ್ ಜಯರಾಮ್ ಶೆಟ್ಟಿ ಕಾನ್ ಬೇರು,ನಿವೃತ್ತ ಮುಖ್ಯೋಪಾಧ್ಯಾಯ ಚಂದ್ರ ಶೆಟ್ಟಿ, ಪಂಚಾಯತ್ ಸದಸ್ಯರು ಗಳಾದ ಅಶೋಕ ಕುಮಾರ್ ಶೆಟ್ಟಿ ದೇವಲ್ಕುಂದ, ರಾಘವೇಂದ್ರ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರವೀಣ್ ಕುಮಾರ್ ಶೆಟ್ಟಿ ಹೊಸೂರು ಹಾಗೆ ದಾಮೋದರ್ ಶರ್ಮ,ಕೆರಾಡಿ ಗ್ರಾಮ ಪಂಚಾಯತ್ ಸದಸ್ಯ ಸಂದೀಪ್ ಶೆಟ್ಟಿ, ಬೀಸಿನಪಾರೆ ಶಾಲಾ ಮುಖ್ಯೋಪಾಧ್ಯಾಯ ರಾಜೀವ ಶೆಟ್ಟಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯ ರವಿಶಂಕರ್ ಹೆಗ್ಡೆ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಹಾಗೆ ಸಹ ಶಿಕ್ಷಕ ಗಣೇಶ ಕಾಸಾಡಿ ವಂದಿಸಿದರು, ಸಹ ಶಿಕ್ಷಕರಾದ ರತ್ನಾಕರ ದೇವಾಡಿಗ ಮತ್ತು ಪ್ರಕಾಶ ಚಂದ್ರ ಶೆಟ್ಟಿ ವಿವಿಧ ಚಟುವಟಿಕೆ ನಿರ್ವಹಿಸಿದರು, ವೇಣುಗೋಪಾಲ್ ಶೆಟ್ಟಿ ಮತ್ತು ಕೀರ್ತನಾ ಉಮೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Leave a Reply