ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ’ಬಿಂದುಶ್ರೀ’ ಪ್ರಶಸ್ತಿ ಪ್ರದಾನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಹೆತ್ತವರ ಸ್ವಪ್ರತಿಷ್ಠೆಯಿಂದ ಮಕ್ಕಳಿಗೆ ಶಿಕ್ಷಣವೆಂಬುದು ಹೊರೆಯಾಗುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಪಂಜರದ ಗಿಣಿಗಳಂತೆ ಪೋಷಿಸಿ ದುಡಿಮೆಗೆ ಸೀಮಿತಗೊಳಿಸಿ ಬೆಳೆಸಿದರೆ ಅವರ ಬದುಕು ನಿಸ್ಸಾರವಾಗುತ್ತದೆ. ಅವರನ್ನು ಸಾಂಸ್ಕೃತಿಕವಾಗಿಯೂ ಸಂಪನ್ನರನ್ನಾಗಿಸಲು ಸಂಗೀತ, ನೃತ್ಯ, ಸಾಹಿತ್ಯದಂತಹ ಕಲೆಗಳಲ್ಲೂ ತೊಡಗಿಸಬೇಕು ಎಂದು ಚಲನಚಿತ್ರ ಸಂಗೀತ ನಿರ್ದೇಶಕ ಗುರುಕಿರಣ್ ಹೇಳಿದರು.

Call us

Click Here

ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ಆಶ್ರಯದಲ್ಲಿ ಶನಿವಾರ ನಡೆದ ಸುರಭಿ ಜೈಸಿರಿ ಕಾರ್ಯಕ್ರಮದಲ್ಲಿ ’ಬಿಂದುಶ್ರೀ’ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಇಂದು ಮನುಷ್ಯನಲ್ಲಿ ಸ್ವಾರ್ಥ ಹೆಚ್ಚುತ್ತಿದೆ ಎಂದು ಒಮ್ಮೊಮ್ಮೆ ಭಾಸವಾಗುತ್ತದೆ. ಆದರೆ ನಾವು ಆಡುವ ಮಾತು ಹಾಗೂ ಮಾಡುವ ಕೆಲಸ ಎರಡೂ ಒಂದೇ ಆಗಿದ್ದರೆ ಮಾತ್ರ ಪ್ರೀತಿ ವಿಶ್ವಾಸದ ಸಮಾಜ ನಿರ್ಮಾಣವಾಗುತ್ತದೆ. ಕಲಾ ಚಟುವಟಿಕೆಗಳು ಅದಕ್ಕೆ ಪೂರಕ ವಾತಾವರಣವನ್ನು ನಿರ್ಮಿಸುತ್ತದೆ ಎಂದರು.

ಸಂಗೀತ ಕೇಳುಗರ ಮನಸ್ಸನ್ನು ಅರಳಿಸುತ್ತದೆ. ನಾನು ಸಂಗೀತ ಕಲಿತಿಲ್ಲವಾದರೂ ನನ್ನಲ್ಲಿನ ಆಸಕ್ತಿ ಮತ್ತು ಛಲದಿಂದ ಸಿಕ್ಕ ಅವಕಾಶವನ್ನು ಸದ್ಭಳಕೆ ಮಾಡಿಕೊಂಡು ಈ ಮಟ್ಟಿಗೆ ಬೆಳಿದಿದ್ದೇನೆ. ಇದಕ್ಕೆ ಅನೇಕ ಹಿರಿಯರ ಮಾರ್ಗದರ್ಶನ, ಆಶೀರ್ವಾದವೇ ಕಾರಣ ಎಂದರು.

ಬೈಂದೂರು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ವಸಂತ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಸುರಭಿ ನೃತ್ಯಗುರು ವಿದ್ವಾನ್ ಚಂದ್ರಶೇಖರ ನಾವಡ ಇವರಿಗೆ ಗುರುವಂದನೆ ಸಲ್ಲಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಸದಸ್ಯ ಜಯಾನಂದ ಹೋಬಳಿದಾರ್, ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು, ಸ್ವರ್ಣೋದ್ಯಮಿ ಬಾಲರಾಜ್ ಶೇಟ್, ಸುರಭಿ ಕಾರ್ಯದರ್ಶಿ ಭಾಸ್ಕರ ಬಾಡ ಉಪಸ್ಥಿತರಿದ್ದರು.

ಹಿರಿಯ ಪತ್ರಕರ್ತ ಎಸ್. ಜನಾರ್ದನ ಮರವಂತೆ ಅಭಿನಂದನಾ ನುಡಿಗಳನ್ನಾಡಿದರು. ಸುರಭಿ ಅಧ್ಯಕ್ಷ ನಾಗರಾಜ ಪಿ. ಯಡ್ತರೆ ಸ್ವಾಗತಿಸಿದರು. ನಿರ್ದೇಶಕ ಸುಧಾಕರ ಪಿ. ಪ್ರಾಸ್ತಾವಿಸಿದರು, ಉಪಾಧ್ಯಕ್ಷ ಆನಂದ ಮದ್ದೋಡಿ ನಿರೂಪಿಸಿದರು. ನಂತರ ನಂತರ ಸುರಭಿ ವಿದ್ಯಾರ್ಥಿಗಳಿಂದ ನಾಟ್ಯದರ್ಪಣ ಮತ್ತು ನೃತ್ಯ ರೂಪಕ ಪ್ರದರ್ಶನಗೊಂಡಿತು.

Click here

Click here

Click here

Click Here

Call us

Call us

Leave a Reply