ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯು ಜ್ಞಾನ ವಾರಿಧಿ ಮತ್ತು ಜ್ಞಾನ ಶರಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿ ಆಯೋಜಿಸಿರುವ ಭಾಷಣ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 8ನೇ ತರಗತಿಯ ರಿಷಿಕಾ ದೇವಾಡಿಗ ಪ್ರಥಮ ಸ್ಥಾನ ಪಡೆದಿದ್ದಾರೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ವಿಜೇತ ವಿದ್ಯಾರ್ಥಿನಿಯನ್ನು ಧರ್ಮಸ್ಥಳದಲ್ಲಿ ನಡೆದ “ಪುರಸ್ಕಾರ ಸಮಾರಂಭದಲ್ಲಿ” ಖ್ಯಾತ ಸಾಹಿತಿ ಡಾ. ವಸಂತ ಭಾರದ್ವಾಜ್ ಕಬ್ಬಿನಾಲೆ ಇವರು ಸನ್ಮಾನಿಸಿದ್ದಾರೆ.
ಈಕೆ ಕಳೆದ ವರ್ಷ ನಡೆದ ಇದೇ ಸ್ಪರ್ಧೆಯಲ್ಲಿ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಳು.
ವಿದ್ಯಾರ್ಥಿಯ ಈ ಸಾಧನೆಯನ್ನು ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಮತ್ತು ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ಅವರು ಅಭಿನಂದಿಸಿದ್ದಾರೆ.