ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿ ಗ್ರಾಮದ ಪ್ರಗತಿಗೆ ಪ್ರತಿಯೊಬ್ಬ ಗ್ರಾಮ ಪಂಚಾಯತ್ ಸದಸ್ಯರು ಶಕ್ತಿಮೀರಿ ಶ್ರಮಿಸಿದ್ದು, ಪಿಡಿಒ ಹಾಗೂ ಸಿಬ್ಬಂದಿಗಳ ಮತ್ತು ಗ್ರಾಮಸ್ಥರ ಸಹಕಾರ ಕೂಡ ಉತ್ತಮವಾಗಿ ದೊರೆತಿದೆ. ಇದರಿಂದಾಗಿ ಕಳೆದ ಐದು ವರ್ಷಗಳಲ್ಲಿ ಗಂಗೊಳ್ಳಿ ಗ್ರಾಮ ಪಂಚಾಯತ್ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಸಾಧನೆಗಳನ್ನು ಮಾಡುವಂತಾಗಲಿ ಎಂದು ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ ಹೇಳಿದರು.
ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ನಿವೃತ್ತ ಮುಖ್ಯೋಪಾಧ್ಯಾಯಿನಿ ಸುಮನಾ ಪಡಿಯಾರ್ ಶುಭಾಶಂಸನೆಗೈದರು. ಗ್ರಾಪಂ ಪಿಡಿಒ ಉಮಾಶಂಕರ, ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಸದಸ್ಯರಾದ ಬಿ.ರಾಘವೇಂದ್ರ ಪೈ ಮತ್ತು ಅಕ್ಕಮ್ಮ ಅನಿಸಿಕೆ ಹಂಚಿಕೊಂಡರು. ಇದೇ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರನ್ನು ಗೌರವಿಸಲಾಯಿತು.
ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಾಧಕ ವಿದ್ಯಾರ್ಥಿಗಳಾದ ಶ್ರೇಜಸ್ ಮತ್ತು ಸಜನಿ ಅವರನ್ನು ಸನ್ಮಾನಿಸಲಾಯಿತು. ಲೆಕ್ಕ ಸಹಾಯಕ ಶೇಖರ್ ಜಿ., ಗ್ರಾಪಂ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.