ಒಕ್ಕೂಟ ವ್ಯವಸ್ಥೆಯ ಮೇಲೆ ನಂಬಿಕೆಯಿಲ್ಲದೆ ಬಿಜೆಪಿಯಿಂದ ರಾಷ್ಟ್ರ ಪ್ರೇಮದ ಪಾಠ ಬೇಕಿಲ್ಲ: ವಿಕಾಸ್ ಹೆಗ್ಡೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯನ್ನು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರು, ಭಾರತ್ ತೋಡೋ ಯಾತ್ರೆ ಎಂದಿರುವುದು ಹಾಸ್ಯಾಸ್ಪದ. ಒಕ್ಕೂಟ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲದ ಬಿಜೆಪಿ ಇಂದು ಸಂಸದ ಡಿ.ಕೆ. ಸುರೇಶ್ ಹೇಳಿಕೆಯನ್ನು ತಿರುಚಿ ರಾಜಕೀಯವಾಗಿ ಬಳಸಿಕೊಳ್ಳುತ್ತಿರುವುದು ಸರಿಯಾದ ನಡೆಯಲ್ಲ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆರೋಪಿಸಿದ್ದಾರೆ.

Call us

Click Here

ಸಂಸದ ಡಿ. ಕೆ ಸುರೇಶ್ ರವರು ದೇಶದ ಐಕ್ಯತೆ, ಸಮಗ್ರತೆ, ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವ ಕೇಂದ್ರ ಸರ್ಕಾರದ ಕುರಿತು ನೀಡಿರುವ ಹೇಳಿಕೆಯನ್ನು ಇಂದು ಬಿಜೆಪಿ ಅದನ್ನು ತಿರುಚಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಅನುದಾನದ ಹಂಚಿಕೆಯಲ್ಲಿ ಎಲ್ಲಾ ರಾಜ್ಯಗಳಿಗೂ ಸಮಾನ ಪಾಲು ನೀಡುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಆದರೆ ಕೇಂದ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದ್ದು ಬಿಜೆಪಿ ಸರ್ಕಾರ ಇರುವ ರಾಜ್ಯಗಳಿಗೆ ಹೆಚ್ಚಿನ ಅನುದಾನ ನೀಡಿ ಉಳಿದ ರಾಜ್ಯಗಳಿಗೆ ಕಡಿಮೆ ಅನುದಾನ ನೀಡುತ್ತಿದೆ. ಈ ತಾರತಮ್ಯ ನೀತಿಯೇ ತೋರಿಸುತ್ತಿದೆ ಬಿಜೆಪಿಗೆ ರಾಷ್ಟದ ಹಿತಕ್ಕಿಂತ ರಾಜಕೀಯ ಹಿತವೇ ಹೆಚ್ಚು ಎಂದು. ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರು ಭಾರತ್ ಜೋಡೋ ಯಾತ್ರೆಯನ್ನು ಟೀಕಿಸುವುದಕ್ಕಿಂತ ತಮ್ಮ ಸಂಸದರ ಮೂಲಕ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ತರುವಂತೆ ಒತ್ತಾಯಿಸುವುದು ಉತ್ತಮ ಎಂದು ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ.

Leave a Reply