ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆ ಕುಂದಾಪುರ ಇಲ್ಲಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ (AIISH) ಮೈಸೂರು ಇದರ ಔಟ್ರೀಚ್ ಸರ್ವೀಸ್ ಸೆಂಟರ್ (ಓ.ಎಸ್.ಸಿ) ನೂತನ ಕಟ್ಟಡ ಹಾಗೂ ನೂತನ ಡಯಾಲಿಸಿಸ್ ಘಟಕವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ನೆರವೇರಿಸಿದರು.
ಆಸ್ಪತ್ರೆಯಲ್ಲಿ ಸುದೀರ್ಘ ಅವಧಿ ಸೇವೆ ಸಲ್ಲಿಸಿ ನಿವೃತ್ತರಾಗಿ, ಅಗಲಿರುವ ದಿ| ವಿಜಯಾ ಬಾಯಿ ಅವರ ಹೆಸರಿನಲ್ಲಿ ಅವರ ಪತಿ, ಪುರಸಭೆ ಮಾಜಿ ಸದಸ್ಯ ಶಿವರಾಮ ಪುತ್ರನ್, ಮಕ್ಕಳು ಮತ್ತು ಕುಟುಂಬಿಕರು ಸ್ಪೀಚ್ ಆ್ಯಂಡ್ ಹಿಯರಿಂಗ್ ಸೆಂಟರ್ ಕಟ್ಟಡ ಕೊಡುಗೆಯಾಗಿ ನೀಡಿದ್ದು ಅವರನ್ನು ಹಾಗೂ ದಾನಿಗಳಾದ ರೋಟರಿ ಕ್ಲಬ್ ಕುಂದಾಪುರ ದಕ್ಷಿಣದ ಅಧ್ಯಕ್ಷ ಸುರೇಶ್ ಮಲ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಭಾಪತಿ ಜಯಕರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ, ಶಾಸಕ ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ ನ ಶಾಸಕರಾದ ಮಂಜುನಾಥ್ ಭಂಡಾರಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಆರೋಗ್ಯ ಇಲಾಖೆಯ ನಿರ್ದೇಶಕಿ ಪುಷ್ಪಲತಾ, ಜಂಟಿ ನಿರ್ದೇಶಕಿ ರಾಜೇಶ್ವರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಐ.ಪಿ ಗಡಾದ ಹಾಗೂ ಮತದಾರರು ಉಪಸ್ಥಿತರಿದ್ದರು.