ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ವರ್ಷದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ಮೊಳಹಳ್ಳಿಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷರಾದ ಬಿ.ಎಮ್. ಸುಕುಮಾರ ಶೆಟ್ಟಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಯಮಿ ಮೊಳಹಳ್ಳಿ ದಿನೇಶ್ ಹೆಗ್ಡೆ ಅವರು ಶುಭ ಹಾರೈಸಿದರು. ಮೊಳಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್ ಶೆಟ್ಟಿ ದ್ಯಾವಲ್ ಬೆಟ್ಟು ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ಸರ್ಕಾರದ ತೋಟಗಾರಿಕಾ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕರಾದ ಎಚ್. ಜಯಶೀಲ ಶೆಟ್ಟಿ ಅವರು ಆಶಯ ನುಡಿಗಳನ್ನಾಡಿದರು. ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ದೀನಪಾಲ ಶೆಟ್ಟಿ ಅವರು ದಿಕ್ಸೂಚಿ ಭಾಷಣ ಮಾಡಿ, ಎನ್.ಎಸ್.ಎಸ್.ನ ಧ್ಯೇಯ ಉದ್ದೇಶಗಳ ಕುರಿತು ವಿವರಿಸಿದರು.
ಈ ಸಂದರ್ಭ ಮೊಳಹಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಚೈತ್ರ ವಿ. ಅಡಪ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ವಿಶಾಲಾಕ್ಷಿ ಶೆಟ್ಟಿ, ಉದ್ಯಮಿ ರಾಜೇಂದ್ರ ಶೆಟ್ಟಿ ಮೊಳಹಳ್ಳಿ, ವಿಜಯ ಬ್ಯಾಂಕಿನ ನಿವೃತ್ತ ಮ್ಯಾನೇಜರ್ ಮೊಳಹಳ್ಳಿ ಪಟೇಲರ ಮನೆ ನಾರಾಯಣ ಶೆಟ್ಟಿ, ಉದ್ಯಮಿ ಜಯಪ್ರಕಾಶ್ ಶೆಟ್ಟಿ ಕಟ್ಟಿನಬುಡ, ನಿವೃತ್ತ ಮುಖ್ಯೋಪಾಧ್ಯಾಯರಾದ ಭಾಸ್ಕರ್ ಶೆಟ್ಟಿ, ಪ್ರಥಮ ದರ್ಜೆ ಗುತ್ತಿಗೆದಾರರಾದ ಕಮಲ್ಕಿಶೋರ್ ಹೆಗ್ಡೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಗೋವಿಂದ ಎಸ್., ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಚಿನ್ ಶೆಟ್ಟಿ ದಬ್ಬೆಕಟ್ಟೆ, ಎನ್.ಎಸ್.ಎಸ್. ಸ್ವಯಂಸೇವಕ ಪ್ರತಿನಿಧಿಗಳಾದ ವೈಷ್ಣವಿ ಎಂ. ಎಸ್, ಶ್ರೀನಾಭ ಉಪಾಧ್ಯಾಯ, ನಶ್ಯಂತ್ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು, ಉಪ ಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು, ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ದೀಪ ಪೂಜಾರಿ ವಂದಿಸಿದರು. ಎನ್.ಎಸ್.ಎಸ್. ಸ್ವಯಂಸೇವಕ ಪ್ರತಿನಿಧಿ ಶ್ರದ್ಧಾ ಕಾರ್ಯಕ್ರಮ ನಿರೂಪಿಸಿ, ಪೂಜಾ ಆಚಾರ್ ಪ್ರಾರ್ಥಿಸಿದರು.