ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಾಲೇಜಿಗೆ ಹೋಗದೆ ಕಾಣೆಯಾಗಿದ್ದ ಮೂಡುಬಿದಿರೆ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ, ಕೊಲ್ಲೂರಿನ ಆದಿರಾ (19) ತನ್ನ ಪ್ರಿಯಕರನ ಜೊತೆ ಮದುವೆಯಾಗಿ ಪ್ರತ್ಯಕ್ಷಳಾಗಿದ್ದಾಳೆ.
ಫೆ.23 ರಂದು ಬೆಳಿಗ್ಗೆ ಕಾಲೇಜಿನ ಬಸ್ಸಲ್ಲಿ ಬಂದಿದ್ದ ಆಕೆ ಕನ್ನಡ ಭವನ ಬಳಿ ಇಳಿದು ಹೋದಾಕೆ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಹೆತ್ತವರು ಮೂಡುಬಿದಿರೆ ಠಾಣೆಗೆ ದೂರು ನೀಡಿದ್ದರು. ಇದೀಗ ಆಕೆ ತನ್ನ ಪ್ರಿಯಕರನೊಂದಿಗೆ ಕೇರಳದಲ್ಲಿ ಮದುವೆಯಾಗಿರುವುದಾಗಿ ತಿಳಿದು ಬಂದಿದೆ.
ತನ್ನದೇ ಊರಿನ ಯುವಕನನ್ನು ಪ್ರೀತಿಸುತ್ತಿದ್ದ ಆಕೆ ಆತನನ್ನೇ ಮದುವೆಯಾಗಿದ್ದಾಳೆ ಎನ್ನಲಾಗಿದ್ದು ಮೂಡುಬಿದಿರೆ ಠಾಣೆಗೆ ಹಾಜರಾಗುವ ಸಾಧ್ಯತೆಯಿದೆ.