Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಚುನಾವಣೆ ಕರಪತ್ರ, ಜಾಹೀರಾತು ಪ್ರಚಾರ ಪಡಿಸುವ ಮುನ್ನ ಪೂರ್ವಾನುಮತಿ ಕಡ್ಡಾಯ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಚುನಾವಣೆ ಕರಪತ್ರ, ಜಾಹೀರಾತು ಪ್ರಚಾರ ಪಡಿಸುವ ಮುನ್ನ ಪೂರ್ವಾನುಮತಿ ಕಡ್ಡಾಯ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಚುನಾವಣಾ ಆಯೋಗ ಸೂಚಿಸಿರುವ ನಿಯಮಾನುಸಾರ ಚುನಾವಣೆಗೆ ಸಂಭಂದಿಸಿದ ಯಾವುದೇ ರೀತಿಯ ಕರಪತ್ರ ಹಾಗೂ ಜಾಹೀರಾತು ಮೂಲಕ ಚುನಾವಣೆ ಪ್ರಚಾರ ಪಡಿಸುವ ಮುನ್ನ ಎಂ.ಸಿ.ಎಂ.ಸಿ ಪ್ರಾಧಿಕಾರದ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.

    Click Here

    Call us

    Click Here

    ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದAತೆ ತಡೆಯುವುದಕ್ಕಾಗಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸ್ಥಳೀಯ ಕೇಬಲ್ ಆಪರೇರ್ಸ್ ಮತ್ತು ನೆಟ್ವರ್ಕ್ ಸರ್ವೀಸ್ ಪ್ರೋವೈರ್ಸ್ ಗಳಿಗೆ ಸೂಕ್ತ ನಿರ್ದೇಶನ ನೀಡಲು ಏರ್ಪಡಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

    2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಯು ಕೆಲವೇ ದಿನಗಳಲ್ಲಿ ಘೋಷಣೆಯಾಗಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಚುನಾವಣಾ ಪ್ರಕ್ರಿಯೆಗೆ ಸಂಭ್ರಮದಿಂದ ಚಟುವಟಿಕೆಗಳಲ್ಲಿ ಭಾಗಿದರರಾಗಿರುವ ಪ್ರತಿಯೊಬ್ಬರೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಅಗದ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದರು.

    ಪ್ರಿಂಟಿಂಗ್ ಪ್ರೆಸ್ ಮಾಲೀಕರು ಕರ ಪತ್ರವನ್ನು ಮುದ್ರಿಸುವ ಮುನ್ನ ಕರಪತ್ರದಲ್ಲಿರುವ ಅಂಶಗಳ ವಿವರಗಳನ್ನು ಒಳಗೊಂಡ ಕರಡು ಕರಪತ್ರವನ್ನು ಮುದ್ರಿಸುವ ಮೂರು ದಿನ ಪೂರ್ವದಲ್ಲಿಯೇ ಎಂ.ಸಿ.ಎಂ.ಸಿ ಗೆ ಸಲ್ಲಿಸಿ, ಅನುಮತಿ ಪಡೆಯಬೇಕು. ಮುದ್ರಣದ ಕರಪತ್ರದಲ್ಲಿ ಮುದ್ರಕರ ಹೆಸರು, ಮುದ್ರಣದ ಸಂಖ್ಯೆಗಳನ್ನು ತಪ್ಪದೇ ನಮೂದಿಸಬೇಕು. ಮುದ್ರಣಕ್ಕೆ ತಗುಲುವ ವೆಚ್ಚವನ್ನು ಸಹ ನೀಡಬೇಕು ಎಂದರು.

    ಕರಪತ್ರದಲ್ಲಿರುವ ವಿಷಯಗಳು ದ್ವೇಷಪೂರಿತವಾಗಿರದೇ, ಇನ್ನೊಬ್ಬರನ್ನು ನಿಂದಿಸುವ ಮತ್ತು ಮಾನಹಾನಿ ಆಗುವುದು ಸೇರಿದಂತೆ ಮತ್ತಿತರ ನಿರ್ಬಂಧಿತ ವಿಷಯಗಳನ್ನು ಮುದ್ರಿಸಿ ಪ್ರಕಟಿಸಬಾರದು. ಇಂತಹ ಅಂಶಗಳು ಇದ್ದಲ್ಲಿ ಕರಪತ್ರದಲ್ಲಿ ಮುದ್ರಿಸಲು ಪೂರ್ವಾನುಮತಿ ನೀಡುವುದಿಲ್ಲ ಎಂದರು.

    Click here

    Click here

    Click here

    Call us

    Call us

    ವಿದ್ಯುನ್ಮಾನ ಮಾಧ್ಯಮಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸುವ ಮುನ್ನ ಜಾಹೀರಾತು ವಿವರಗಳನ್ನು ಎಂ.ಸಿ.ಎಂ.ಸಿ ಸಮಿತಿಯ ಮುಂದೆ ನಿಗಧಿತ ನಮೂನೆಗಳಲ್ಲಿ ನೀಡಿ, ಪೂರ್ವಾನುಮತಿ ಪಡೆದು ಪ್ರಚಾರಪಡಿಸಬೇಕು. ಸಮಾಜದಲ್ಲಿ ಶಾಂತಿ ಕದಡುವುದು, ಇನ್ನೊಬ್ಬರನ್ನು ಅಪಮಾನಿಸುವುದು, ಯಾವುದೇ ಧರ್ಮವನ್ನು ಹೀಯಾಳಿಸುವುದು ಸೇರಿದಂತೆ ಮತ್ತಿತರ ಉಲ್ಲಂಘಿಸದAತಿರಬೇಕು ಎಂದರು.

    ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಕರಪತ್ರಗಳನ್ನು ಮುದ್ರಿಸುವುದು, ಜಾಹೀರಾತುಗಳನ್ನು ಪ್ರಚಾರ ಪಡಿಸುವುದು ಮಾಡಿದ್ದಲ್ಲಿ ಅಂತಹವರ ಮೇಲೆ ಆರ್.ಪಿ ಕಾಯ್ದೆಯಡಿಯಲ್ಲಿ ನಿರ್ದಾಕ್ಷಿಣ್ಯವಾಗಿ ಕಾನೂನಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

    ಜಿಲ್ಲೆಯಲ್ಲಿ ನ್ಯಾಯಸಮ್ಮತ, ಶಾಂತಿಯುತ ಲೋಕಸಭಾ ಚುನಾವಣೆ ನಡೆಸಲು ಪ್ರತಿಯೊಬ್ಬರೂ ಸಹಕರಿಸಬೇಕು. ಚುನಾವಣಾ ಆಯೋಗ ನೀಡುವ ನಿರ್ದೇಶನಗಳು ಹಾಗೂ ನಿಯಮಗಳನ್ನು ಪಾಲಿಸಬೇಕು ಎಂದರು.

    ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಕೇಬಲ್ ನೆಟ್ವರ್ಕ್ನ ವರದಿಗಾರರು, ಪ್ರಿಂಟಿAಗ್ ಪ್ರೆಸ್ ಮಾಲೀಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸರ್ಕಾರಿ, ಸರ್ಕಾರೇತರ ಸಂಸ್ಥೆಗಳ ದೈನಂದಿನ ಚಟುವಟಿಕೆಯಲ್ಲಿ ಕನ್ನಡ ಭಾಷೆಯ ಬಳಕೆ ಕಡ್ಡಾಯ: ಜಿಲ್ಲಾಧಿಕಾರಿ

    20/12/2025

    ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ

    19/12/2025

    ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಮೂಡ್ಲುಕಟ್ಟೆ: ವ್ಯಾಲ್ಯು ಅಡಿಷನ್ ಕೆಪ್ಯಾಸಿಟಿ ಬಿಲ್ಡಿಂಗ್‌ ಕಾರ್ಯಕ್ರಮ
    • ಕುಂದಾಪುರ: ಜೂಜಾಟದಲ್ಲಿ ತೊಡಗಿದ್ದ 3 ಮಂದಿಯ ಬಂಧನ
    • ಸಹಕಾರ ಭಾರತಿ ಅಭ್ಯಾಸ ವರ್ಗ: ಜನರಿಗೆ ಹೆಚ್ಚು ಸಹಕಾರ ನೀಡುವುದೇ ಗುರಿಯಾಗಲಿ – ಶಾಸಕ ಕಿರಣ್ ಕುಮಾರ್ ಕೊಡ್ಗಿ
    • ದೇವಾಡಿಗ ನವೋದಯದ ಸಂಘ ಬೆಂಗಳೂರು: ದಿನದರ್ಶಿಕೆ ಬಿಡುಗಡೆ ಸಮಾರಂಭ
    • ಕೋಡಿಕನ್ಯಾಣದಲ್ಲಿ ವೈಭವದ ಉಂಜಲೋತ್ಸವ ಸಂಪನ್ನ, ತಿರುಮಲಾಧೀಶನ್ನು ಕಣ್ತುಂಬಿಕೊಂಡ ಭಕ್ತರು

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.