ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ನೇತೃತ್ವದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಐಸಿಐಸಿಐ ಬ್ಯಾಂಕ್ ವತಿಯಿಂದ ಕಾಲೇಜಿನಲ್ಲಿ ಕ್ಯಾಂಪಸ್ ನೇಮಕಾತಿ ಡ್ರೆöÊವ್ ನೆರವೇರಿತು.
ಎನ್.ಐ.ಟಿ.ಐ ಕನ್ಸ್ಲ್ಟೆಂಟ್ ಶ್ರೀನಿಧಿ ಮಾತನಾಡಿ ವಿದ್ಯಾರ್ಥಿಗಳಿಗೆ ಐಸಿಐಸಿಐ ಬ್ಯಾಂಕ್ ಒದಗಿಸಿಕೊಟ್ಟ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿ, ಮಾತನಾಡಿ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹಾಗೂ ತರಬೇತಿಯಲ್ಲಿನ ಸಕ್ರಿಯ ಭಾಗವಹಿಸುವಿಕೆ ಸಂದರ್ಶನದಲ್ಲಿ ಯಶಸ್ಸನ್ನು ತಂದುಕೊಡುತ್ತದೆ ಎಂದರು.
ಈ ಸಂದರ್ಭ ಎನ್.ಐ.ಟಿ.ಐ ಕನ್ಸ್ಲ್ಟೆಂಟ್ ಅನನ್ಯ ಉಪಸ್ಥಿತರಿದ್ದರು. ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿ ಹರೀಶ್ ಕಾಂಚನ್ ವಂದಿಸಿದರು. ವಿದ್ಯಾರ್ಥಿಗಳಾದ ರಶ್ಮಿ ಪ್ರಾರ್ಥಿಸಿ, ಚೇತನ್ ಶೆಟ್ಟಿ ಸ್ವಾಗತಿಸಿ, ಸೌಭಾಗ್ಯ ಕಿಣಿ ಕಾರ್ಯಕ್ರಮ ನಿರೂಪಿಸಿದರು.