Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಶ್ವೇಶ್ವರ ಸೋಮಯಾಜಿ ಮೋರ್ಟು ಅವರಿಗೆ ವಂಡ್ಸೆ ನಾರಾಯಣ ಗಾಣಿಗ ಪ್ರಶಸ್ತಿ
    ಊರ್ಮನೆ ಸಮಾಚಾರ

    ವಿಶ್ವೇಶ್ವರ ಸೋಮಯಾಜಿ ಮೋರ್ಟು ಅವರಿಗೆ ವಂಡ್ಸೆ ನಾರಾಯಣ ಗಾಣಿಗ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ವಂಡ್ಸೆಯ ಶ್ರೀ ತಿರುಮಲ ಲಕ್ಷ್ಮೀವೆಂಕಟರಮಣ ದೇವಸ್ಥಾನದ ವಾರ್ಷಿಕ ಪ್ರತಿಷ್ಠಾ ವರ್ಧಂತ್ಯುತ್ಸವದ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಂಡ್ಸೆ ದಿ|ನಾರಾಯಣ ಗಾಣಿಗರ ಸ್ಮರಣಾರ್ಥ ನಾರಾಯಣ ಗಾಣಿಗರ ಕುಟುಂಬದವರು ಕೊಡಮಾಡುವ ವಂಡ್ಸೆ ನಾರಾಯಣ ಗಾಣಿಗ ಪ್ರಶಸ್ತಿ-2024ಕ್ಕೆ ಬಡಗುತಿಟ್ಟಿನ ಯಕ್ಷಗಾನ ಸಾಂಪ್ರದಾಯಿಕ ಶೈಲಿಯ ಭಾಗವತ, ಯಕ್ಷಗುರು, ಮದ್ದಳೆವಾದಕರಾದ ವಿಶ್ವೇಶ್ವರ ಸೋಮಯಾಜಿ ಮೋರ್ಟು ಇವರನ್ನು ಆಯ್ಕೆ ಮಾಡಲಾಗಿದೆ.

    Click Here

    Call us

    Click Here

    ಮೋರ್ಟು ಶಿವರಾಮ ಸೋಮಯಾಜಿ ಮತ್ತು ಮೀನಾಕ್ಷಿ ದಂಪತಿಗಳ ಪುತ್ರರಾಗಿ ೧೯೫೦ರಲ್ಲಿ ಜನಿಸಿದ ಇವರು ಯಕ್ಷಗಾನದ ಬಗ್ಗೆ ಆಕರ್ಷಿತರಾಗಿ ಬೆಳ್ಳಾಲದ ವೆಂಕಟಾಚಲ ಹೆಬ್ಬಾರ್ ಅವರ ಬಳಿ ತಾಳ ಅಭ್ಯಾಸ ಮಾಡಿದರು. ಕದಳಿಯ ಸೀತಾರಾಮ ಮಧ್ಯಸ್ಥ, ಜನ್ಸಾಲೆ ನಾಗಪ್ಪಯ್ಯವರ ಗರಡಿಯಲ್ಲಿ ಮದ್ದಳೆಯ ನುಡಿತಗಳನ್ನು ಸಾಂಪ್ರದಾಯಕವಾಗಿ ಅಭ್ಯಾಸಿಸಿ ಬಳಿಕ ಮಾರ್ವಿ ವಾದಿರಾಜ ಹೆಬ್ಬಾರ್ ಅವರಲ್ಲಿ ಭಾಗವತಿಕೆಯನ್ನು ಕರಗತ ಮಾಡಿಕೊಂಡರು. 1976ರಲ್ಲಿ ಹಂಗಾರಕಟ್ಟೆ ಯಕ್ಷಗಾನ ಕೇಂದ್ರದಲ್ಲಿ ಪ್ರಾಚಾರ್ಯ ನಾರ್ಣಪ್ಪ ಉಪ್ಪೂರರ ಬಳಿ ಭಾಗವತಿಕೆಯ ರಂಗತಂತ್ರದ ಸೂಕ್ಷ್ಮಗಳನ್ನು ಕರಗತ ಮಾಡಿಕೊಂಡರು. ಕಮಲಶಿಲೆ, ಮಾರಣಕಟ್ಟೆ, ಮಂದಾರ್ತಿ, ಕೊಡವೂರು, ಪೆರ್ಡೂರು, ಶಿವರಾಜಪುರ, ಸೌಕೂರು ಮೇಳಗಳಲ್ಲಿ 28 ವರ್ಷಗಳ ಕಲಾಸೇವೆ ಸಲ್ಲಿಸಿದರು. ಬಡಗಿನ ಮೇರು ಭಾಗವತರಾಗಿದ್ದ ಮರವಂತೆ ನರಸಿಂಹ ದಾಸ, ಶ್ರೀನಿವಾಸ ಹಾಗೂ ಅಂಪಾರು ವೈದ್ಯರಿಗೆ ಮದ್ದಲೆಯಲ್ಲಿ ಸಾಥ್ ನೀಡಿ ಸೈ ಎನಿಸಿಕೊಂಡರು. ಶ್ರೀ ಕಮಲಶಿಲೆ ಕ್ಷೇತ್ರ ಮಹಾತ್ಮೆ ಹಾಗೂ ರಾಜಾರತ್ನ ಸೇನ ಎಂಬ ಪ್ರಸಂಗಗಳನ್ನು ರಚಿಸಿದ್ದಾರೆ. ಇವರ ಕಲಾಸೇವೆಗೆ ಹಲವಾರು ಪ್ರಶಸ್ತಿಗಳು ಲಭಿಸಿವೆ. ಯಕ್ಷಬಂಧು ಅಭಿನಂದನಾ ಗ್ರಂಥವನ್ನು ಸಲ್ಲಿಸಲಾಗಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    12 − 8 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.