ಅಭಿವೃದ್ಧಿಯ ಆಧಾರದಲ್ಲಿ ರಾಜ್ಯ ಕಾಂಗ್ರೆಸ್ ಚುನಾವಣೆ ಎದುರಿಸಲಿದೆ: ಸಚಿವ ಮಧು ಬಂಗಾರಪ್ಪ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕಾಂಗ್ರೆಸ್ ಯಾವತ್ತೂ ಜಾತಿ ಧರ್ಮಗಳ ಆಧಾರದಲ್ಲಿ ಚುನಾವಣೆ ಎದುರಿಸಿಲ್ಲ. ಬದಲಾಗಿ ಜನರ ಭಾವನೆಗಳನ್ನು ಅರಿತುಕೊಂಡು ಅವರ ಹೊಟ್ಟೆ ಹಸಿವನ್ನು ನೀಗಿಸುವಲ್ಲಿ ಪ್ರಯತ್ನಿಸುತ್ತದೆ. ಹಾಗಾಗಿಯೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಶೇ.91ರಷ್ಟು ಜನರನ್ನು ಗ್ಯಾರೆಂಟಿಗಳ ಮೂಲಕ ತಲುಪಿರುವ ಹೆಮ್ಮೆ ಇದೆ. ಲೋಕಸಭಾ ಚುನಾವಣೆಯಲ್ಲಿಯೂ ರಾಜ್ಯದ ಕಾಂಗ್ರೆಸ್ ಸರಕಾರದ ಸಾಧನೆಗಳ ಮೂಲಕವೇ ಮತ ಯಾಚಿಸುತ್ತೇವೆ ಎಂದು ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

Call us

Click Here

ಕುಂದಾಪುರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ಧಿಗೋಷ್ಟಿಯಲ್ಲಿ ಅವರು ಮಾತನಾಡಿ, ರಾಜಕಾರಣಿಗಳು ಜಾತಿ ಧರ್ಮಗಳ ಆಧಾರದಲ್ಲಿ ಹಾಗೂ ಭಾವನಾತ್ಮಕವಾಗಿ ಚುನಾವಣೆ ಎದುರಿಸುತ್ತಾರೆ. ನಾವು ಅಭಿವೃದ್ಧಿಯ ಆಧಾರದಲ್ಲಿ ಚುನಾವಣೆ ಎದುರಿಸುತ್ತೇವೆ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ನೀಡಿದ್ದ ಐದೂ ಗ್ಯಾರೆಂಟಿಗಳನ್ನೂ ಪೂರೈಸುವ ಮೂಲಕ ರಾಜಕಾರಣದಲ್ಲಿ ಜನರ ನಂಬಿಕೆ ಮತ್ತು ವಿಶ್ವಾಸವನ್ನು ಉಳಿಸಿಕೊಂಡಿದೆ ಎಂದರು.

ಶಿವಮೊಗ್ಗ ಸಂಸದರ ಸಾಧನೆ ಶೂನ್ಯ:
ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಅವರ ಸಾಧನೆಗಳು ಬ್ಯಾನರುಗಳಿಗಷ್ಟೇ ಸೀಮಿತವಾಗಿದೆ. ಅದನ್ನು ಮೀರಿ ಏನೂ ಸಾಧನೆ ಮಾಡಿಲ್ಲ. ಲಂಚದ ಹಣದಲ್ಲಿ ಅವರು ಬಂಗಾರಪ್ಪನವರ ವಿರುದ್ಧ ಚುನಾವಣೆಯಲ್ಲಿ ಗೆದ್ದು ಬಂದಿದ್ದರು. ಸೋಲುವ ಭಯದಲ್ಲಿ ಅಭಿವೃದ್ಧಿಯ ಮಾತನಾಡದೇ ಮೋದಿ ಜಪ ಮಾಡುತ್ತಿದ್ದಾರೆ. ಶಿವಮೊಗ್ಗಕ್ಕೆ ಬಂದ ಮೋದಿಯವರು ಜಾತಿ ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವ ಕೆಲಸ ಮಾಡಿಹೋಗಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಲಿದ್ದೇವೆ ಎಂದರು.

ದೇಶದಾದ್ಯಂತ ರಾಜಕೀಯ ಬದಲಾವಣೆಗಳನ್ನು ಜನ ಬಯಸುತ್ತಿದ್ದಾರೆ ಎಂದ ಅವರು, ಉಡುಪಿಯಲ್ಲಿ ಎರಡೆರಡು ಬಾರಿ ಸಂಸದೆಯಾದ ಶೋಭಾ ಕರಂದ್ಲಾಜೆ ಅಲ್ಲಿನ ಜನ ಗೋ ಬ್ಯಾಕ್ ಎನ್ನುವ ಮೂಲಕ ಸಂಸದೆಯ ಸಾಧನೆಯನ್ನು ಎತ್ತಿ ಹಿಡಿದ್ದಾರೆ ಎಂದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಅನಾಯಾಸವಾಗಿ ಗೆಲ್ಲಲಿದೆ ಎಂದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನನ್ನ ಸಹೋದರಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ನಿಂದ ಸ್ಪರ್ಧಿಸುತ್ತಿದ್ದು, ರಾಜ್ಯ ಸರ್ಕಾರದ ಗ್ಯಾರೆಂಟಿ ಸಾಧನೆಗಳು ಮತ್ತು ಮಾಜೀ ಮುಖ್ಯಮಂತ್ರಿ ಬಂಗಾರಪ್ಪನವರ ಜನಪರ ಕಾರ್ಯಗಳು ಕಾಂಗ್ರೆಸ್ ಪಕ್ಷದ ಕೈಹಿಡಿಯಲಿದೆ ಎಂದರು.

Click here

Click here

Click here

Click Here

Call us

Call us

ಶಿಕ್ಷಣದಲ್ಲಿ ರಾಜಕೀಯ ಮಾಡಲ್ಲ:
5, 8 ಹಾಗೂ 9ನೇ ತರಗತಿಗಳಿಗೆ ಬೋರ್ಡ್ ಎಕ್ಸಾಂ ಮಾಡಲು ಕಾನೂನು ಮಾಡಲಾಗಿತ್ತು. ಆದರೆ ಕೆಲವು ಸಂಘ ಸಂಸ್ಥೆಗಳು ಸುಪ್ರಿಂ ಕೋರ್ಟಿಗೆ ಹೋಗಿದ್ದರಿಂದ ಪರೀಕ್ಷೆ ತಡೆಹಿಡಿಯಲಾಗಿದೆ. ಸದ್ಯದಲ್ಲಿಯೇ ಕೋರ್ಟ್ ತೀರ್ಪು ಬರಲಿದ್ದು ಅದರಂತೆ ನಡೆದುಕೊಳ್ಳಲಿದ್ದೇವೆ. ನಾನು ಅಧಿಕಾರ ವಹಿಸಿಕೊಂಡ ತಕ್ಷಣ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದೇವೆ. ಪಠ್ಯಪುಸ್ತಕದಲ್ಲಿ ಯಾವ ಪಕ್ಷ ಸಿದ್ಧಾಂತಕ್ಕೆ ರುಚಿಸುವಂತೆ ಇದೆ ಅಂತ ತೀರ್ಮಾನಿಸುವುದಕ್ಕಿಂತ ವಿದ್ಯಾರ್ಥಿಗಳ ಅಭ್ಯುದಯಕ್ಕೆ ಪೂರಕ ವಿಚಾರಗಳು ಇರುವುದು ಮುಖ್ಯ. ಆ ಹಿನ್ನೆಲೆಯಲ್ಲಿ ಪುಠ್ಯಪುಸ್ತಕ ಪರಿಷ್ಕರಣೆ ಮಾಡಲಾಗಿದೆ ಎಂದ ಅವರು ರಾಜ್ಯದಲ್ಲಿ ಎನ್.ಇ.ಪಿ ಜಾರಿಗೊಳಿಸುವ ಪ್ರಶ್ನೆಯೇ ಇಲ್ಲ. ಇಲ್ಲ ಏನೀದ್ದರು ಎಸ್.ಇ.ಪಿ ಮಾತ್ರವೇ ಮುಂದುವರಿಯಲಿದೆ ಎಂದರು.

ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜೀ ಶಾಸಕರುಗಳಾದ ಕೆ. ಗೋಪಾಲ ಪೂಜಾರಿ, ಬಿ.ಎಂ. ಸುಕುಮಾರ್ ಶೆಟ್ಟಿ, ವಿವಿಧ ಬ್ಲಾಕ್ ಗಳ ಅಧ್ಯಕ್ಷರಾದ ಅರವಿಂದ ಪೂಜಾರಿ, ಪ್ರದೀಪ್ ಕುಮಾರ್ ಶೆಟ್ಟಿ, ಮುಖಂಡರುಗಳಾದ ಜಿ.ಎ.ಬಾವಾ, ರಾಜು ಪೂಜಾರಿ, ಅಶೋಕ್ ಪೂಜಾರಿ ಬೀಜಾಡಿ ಮೊದಲಾದವರು ಇದ್ದರು.

Leave a Reply