Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರಿನಲ್ಲಿ ಚುನಾವಣೆಗೆ ಸಕಲ ಸಿದ್ಧತೆ
    ಉಡುಪಿ ಜಿಲ್ಲೆ

    ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರಿನಲ್ಲಿ ಚುನಾವಣೆಗೆ ಸಕಲ ಸಿದ್ಧತೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ‌ ಸುದ್ದಿ.
    ಉಡುಪಿ:
    ಲೋಕಸಭಾ ಚುನಾವಣೆಯನ್ನು ನ್ಯಾಯ ಸಮತ ಹಾಗೂ ನಿರ್ಭೀತವಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ. ಅವರು ತಿಳಿಸಿದರು.

    Click Here

    Call us

    Click Here

    ಅವರು ಉಡುಪಿಯ ರಜತಾದ್ರಿಯ ಕೆಸ್ವನ್ ಕೇಂದ್ರದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಉಡುಪಿ ಜಿಲ್ಲಾ ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣೆ ಪೂರ್ವ ಸಿದ್ಧತೆ ಕುರಿತ ಅಂತರ್ ಜಿಲ್ಲಾ ಸಮನ್ವಯ ಸಮಿತಿಯ ಸಭೆಯಲ್ಲಿ ಮಾತನಾಡುತ್ತಿದ್ದರು. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ನಗರ ವ್ಯಾಪ್ತಿಯಲ್ಲಿ 26 ಹಾಗೂ ಗ್ರಾಮೀಣ ವ್ಯಾಪ್ತಿಯಲ್ಲಿ 220 ಓಟ್ಟು246 ಮತಗಟ್ಟೆಗಳಿದ್ದು ,11 6310 ಪುರುಷರು,1 21413 ಮಹಿಳೆಯರು 3 ತೃತೀಯ ಲಿಂಗದವರು ಸೇರಿದಂತೆ ಒಟ್ಟು 2,37,726 ಮತದಾರರು ಇದ್ದಾರೆ ಎಂದರು.

    ಜಿಲ್ಲೆಯಲ್ಲಿ 246 ಮತದಾನ ಕೇಂದ್ರಗಳಿದ್ದು ಅವುಗಳಲ್ಲಿ 42 ಸೂಕ್ಷ್ಮ 12 ಅತಿಸೂಕ್ಷ್ಮ 190 ಸಾಮಾನ್ಯ ಮತದಾನ ಕೇಂದ್ರಗಳಿವೆ ಎಂದ ಅವರು ಎಂ.ಸಿ.ಸಿ ಉಲ್ಲಂಘನೆಯ ದೂರು ನಿರ್ವಹಣೆಗೆ ಸಹಾಯಕ ಚುನಾವಣೆ ಅಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್ 24*7 ಕಾರ್ಯ ನಿರ್ವಹಿಸಿದ್ದು ಸಂಖ್ಯೆ 18004252099 ಆಗಿರುತ್ತದೆ ಎಂದರು. ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಎಫ್ .ಎಸ್ .ಟಿ ,ವಿ .ಎಸ್. ಟಿ ,ಎಸ್ ,ಎಸ್, ಟಿ ಸೇರಿದಂತೆ 21ಜನ ಸೆಕ್ಟರ್ ಆಫೀಸರ್ ಗಳನ್ನು ನೇಮಕ ಮಾಡಲಾಗಿದೆ ಎಂದರು.

    ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ನಿಗಾ ವಹಿಸಲಾಗುತ್ತಿದೆ ಎಂದವರು ಈ ಕಾರ್ಯಕ್ಕೆ ಚುನಾವಣಾ ವೆಚ್ಚ ನಿಗಾ ಸಮಿತಿ, ಎಂ .ಸಿ .ಎಂ .ಸಿ ಸಮಿತಿ ಹಾಗೂ ಸಿವಿಜಲ್ ಸಮಿತಿಯು ಸಹಾಯಕ ಚುನಾವಣೆ ಅಧಿಕಾರಿಗಳ ಉಸ್ತುವಾರಿಯಲ್ಲಿ ನಡೆಯಲಿದೆ ಎಂದರು.

    ಚುನಾವಣಾ ಅಕ್ರಮಗಳನ್ನು ತಡೆಯಲು 26 ಅಂತರ್ ಜಿಲ್ಲಾ ಗಡಿಗಳಲ್ಲಿ ಚೆಕ್ ಪೋಸ್ಟ್ ಳನ್ನು ತೆರೆಯಲಾಗಿದೆ. ಎರಡು ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳು, ಪೊಲೀಸ್, ಫಾರೆಸ್ಟ್ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

    Click here

    Click here

    Click here

    Call us

    Call us

    ರಾಜಕೀಯ ಪಕ್ಷಗಳ ಪದಾಧಿಕಾರಿಗಳ ಸಮ್ಮುಖದಲ್ಲಿ ಇ.ವಿ.ಎಂ ಹಾಗೂ ವಿ.ವಿಪ್ಯಾಟ್ಗಳನ್ನು ರಾಂಡಮೈಜೇಶನ್ ಮಾಡುವ ಮೂಲಕ ಹಂಚಿಕೆ ಮಾಡಲಾಗಿದೆ ಎಂದರು.

    ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಶಿವಮೊಗ್ಗ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಉಡುಪಿ
    ಜಿಲ್ಲಾ ಪೊಲೀಸ್ ಅಧಿಕಾರಿ ಅರುಣ್‌ ಕೆ., ಶಿವಮೊಗ್ಗದ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ , ಉಡುಪಿಯ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ವಿವಿಧ ಸಮಿತಿಯ ನೋಡಲ್ ಅಧಿಕಾರಿಗಳು ಹಾಗೂ ಚುನಾವಣಾ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

    07/07/2026

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026
    Leave A Reply Cancel Reply

    four × 2 =

    Call us

    Click Here

    Call us

    Call us

    Call us
    Highest Viewed Recently
    • ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ
    • ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
    • ಜಾನುವಾರುಗಳ ಸಂಖ್ಯೆ ಗಣನೀಯ ಇಳಿಕೆ ಆಗಿರುವುದು ಆತಂಕ ಪಡುವ ವಿಚಾರ: ಶಾಸಕ ಗುರುರಾಜ್‌ ಗಂಟಿಹೊಳೆ
    • ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.