ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚು ಸೀಟು ಗೆಲ್ಲುವ ವಿಶ್ವಾಸ: ಡಿಸಿಎಂ ಡಿ.ಕೆ. ಶಿವಕುಮಾರ್

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಲೋಕಸಭಾ ಚುನಾವಣೆಗೆ ಎದುರಿಸಲು ಪಕ್ಷ ತಯಾರಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆಯಿದೆ. ಈ ಭಾರಿ ಹೆಚ್ಚಿನ ಸ್ಥಾನಪಡೆಯುವ ವಿಶ್ವಾಸವಿದೆ ಎಂದು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

Call us

Click Here

ಅವರು ಮಂಗಳವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪನವರು ಪಕ್ಷೇತರರಾಗಿ ಕಣಕ್ಕಿಳಿಯುವ ಬಗ್ಗೆ, ಪ್ರತಿಕ್ರಿಯಿಸಲು ನಿರಾಕರಿಸಿದ ಅವರು ಸದ್ಯ ನಾನು ದೇವರ ದರ್ಶನಕ್ಕಾಗಿ ಆಗಮಿಸಿದ್ದು, ರಾಜಕೀಯದ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದರು.

ದೇವಳದ ಅರ್ಚಕರಾದ ಕೆ.ಎನ್. ನರಸಿಂಹ ಅಡಿಗ ಹಾಗೂ ಕೆ.ವಿ.ಶ್ರೀಧರ ಅಡಿಗ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಬಿ.ಎಂ. ಸುಕುಮಾರ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಯು.ಬಿ. ಶೆಟ್ಟಿ, ಅಶೋಕಕುಮಾರ ಕೊಡವೂರು, ಎಸ್. ರಾಜು ಪೂಜಾರಿ,‌ ಮಿಥುನ್ ರೈ, ದಿನೇಶ ಹೆಗ್ಡೆ ಮೊಳಹಳ್ಳಿ, ಪ್ರಸಾದ ಕಾಂಚನ್, ಸುರೇಂದ್ರ ಶೆಟ್ಟಿ, ಕಿಶನ್ ಹೆಗ್ಡೆ, ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಅರವಿಂದ ಪೂಜಾರಿ, ರಮೇಶ ಗಾಣಿಗ, ಬಾಬು ಶೆಟ್ಟಿ ತಗ್ಗರ್ಸೆ, ಶಂಕರ ಪೂಜಾರಿ, ವಿಜಯ ಶೆಟ್ಟಿ, ನಾಗರಾಜ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

seventeen − six =