ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ಅಂತರ್ ತರಗತಿ ಪ್ರತಿಭಾ ಪ್ರದರ್ಶನ ‘ಜಾನಪದ ಲೋಕ’ ಕಾರ್ಯಕ್ರಮ ಕಾಲೇಜಿನ ಆವರಣದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಸ್. ಸಚ್ಚಿದಾನಂದ ಚಾತ್ರ ಅವರು ಮಾತನಾಡಿ ವಿದ್ಯಾರ್ಥಿಗಳು ಶಿಸ್ತು ಬದ್ಧವಾಗಿ ತಮ್ಮ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪ್ರಯತ್ನ ಮಾಡಬೇಕು ಎಂದು ಹೇಳಿದರು.
ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ್ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಶಸ್ತಿ ವಿಜೇತ ಜಾನಪದ ಕಲಾವಿದ ಶಂಕರದಾಸ ಚಂಡ್ಕಲಾ ಊಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿಶ್ವಸ್ಥ ಮಂಡಳಿಯ ಸದಸ್ಯರಾದ ರಾಜೇಂದ್ರ ತೋಳಾರ್, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ ಉಪಸ್ಥಿತರಿದ್ದರು.
ವಾಣಿಜ್ಯ ವಿಭಾಗದ ಮುಖ್ಯಸ್ಥ ಅರುಣ್ ಎ. ಎಸ್. ಕಾರ್ಯಕ್ರಮ ನಿರೂಪಿಸಿದರು.
ನಂತರ ನಡೆದ ಪ್ರತಿಭಾ ಪ್ರದರ್ಶನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಕಲಾ ವಿಭಾಗದ ವಿದ್ಯಾರ್ಥಿಗಳು, ದ್ವಿತೀಯ ಸ್ಥಾನವನ್ನು ಅಂತಿಮ ವಾಣಿಜ್ಯ ವಿದ್ಯಾರ್ಥಿಗಳು ತೃತೀಯ ಸ್ಥಾನವನ್ನು ಪ್ರಥಮ ಮತ್ತು ದ್ವಿತೀಯ ವಿಜ್ಞಾನ ವಿದ್ಯಾರ್ಥಿಗಳು ಪಡೆದರು.
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸ್ಪೃಧೆಯ ತೀರ್ಪುಗಾರರಾದ ಜಾನಪದ ಕಲಾವಿದ ಶಂಕರದಾಸ ಚಂಡ್ಕಲಾ, ರಮೇಶ್ ಕಲ್ಮಾಡಿ, ಭಾಗ್ಯಲಕ್ಷ್ಮಿ ಉಪ್ಪೂರು ಉಪಸ್ಥಿತರಿದ್ದರು.
ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ, ಲಲಿತಕಲಾ ಸಂಘದ ಸಂಚಾಲಕರಾದ ಶಶಾಂಕ್ ಪಟೇಲ್ ಉಪಸ್ಥಿತರಿದ್ದರು
ಕನ್ನಡ ಉಪನ್ಯಾಸಕ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು.