Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರಜಾಪ್ರಭುತ್ವಕ್ಕೆ ಚುನಾವಣೆಯೇ ತಳಪಾಯ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ
    ಉಡುಪಿ ಜಿಲ್ಲೆ

    ಪ್ರಜಾಪ್ರಭುತ್ವಕ್ಕೆ ಚುನಾವಣೆಯೇ ತಳಪಾಯ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

    Updated:29/03/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಪ್ರಜಾಪ್ರಭುತ್ವಕ್ಕೆ ಚುನಾವಣೆಯೇ ತಳಪಾಯ. ಈ ಪ್ರಕ್ರಿಯೆ ಪಾರದರ್ಶಕವಾಗಿ ನಡಿಯಬೇಕು ಮತ್ತು ಎಲ್ಲರೂ ಭಾಗವಹಿಸುವಂತಾಗಬೇಕು. ಜನರು ಊರ ಹಬ್ಬವನ್ನು ಉತ್ಸಾಹದಿಂದ ಆಚರಿಸುವಂತೆ ಮತದಾನವೂ ಆಗಬೇಕು ಎಂಬುದು ನಮ್ಮ ಉದ್ದೇಶ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಐಎಎಸ್ ಹೇಳಿದರು.

    Click Here

    Call us

    Click Here

    ಉಡುಪಿ ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿ ನೇತೃತ್ವದಲ್ಲಿ ತಾಲೂಕಿನ ಶಿರೂರು ಅಳ್ವೆಗದ್ದೆ ಮೀನುಗಾರಿಕಾ ಲಂಗರು ಪ್ರದೇಶದಲ್ಲಿ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.

    ಇತ್ತಿಚಿಗೆ ಯುವಜನತೆ ಚುನಾವಣೆಯಿಂದ ವಿಪುಖರಾಗುತ್ತಿರುವುದು ಕಂಡುಬರುತ್ತಿದೆ. ಚುನಾವಣಾ ದಿನವೆಂದರೆ ರಜಾ ದಿನವಲ್ಲ. ಸಂವಿಧಾನ ನಮಗೆ ನೀಡುವ ಹಕ್ಕು ಹಾಗೂ ಜವಾಬ್ದಾರಿಯನ್ನು ನಿಭಾಯಿಸಲು ಮತದಾನ ಮಾಡುವುದು ಅಗತ್ಯ. ವಿಧಾನಸಭಾ ಚುನಾವಣೆಯಲ್ಲಿ ಶೇ.22 ಮಂದಿ ಮತ ಚಲಾಯಿಸಿಲ್ಲ. ಶೇ.100 ಮತದಾನ ಮಾಡುವ ಕಾರ್ಯವಾಗಬೇಕು ಎಂದರು.

    ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್ ಪ್ರತಿಜ್ಞಾ ವಿಧಿ ಭೋದಿಸಿದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ಕುಮಾರಿ, ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್, ಕರಾವಳಿ ಕಾವಲು ಪಡೆಯ ಎಸ್ಪಿ ಮಿಥುನ್, ಸಹಾಯಕ ಚುನಾವಣಾಧಿಕಾರಿ ಮಂಜುನಾಥ್, ಬೈಂದೂರು ತಹಶಿಲ್ದಾರ್ ಪ್ರದೀಪ್, ಡಯಟ್ ಪ್ರಾಂಶುಪಾಲರಾದ ಗೋವಿಂದ ಮಡಿವಾಳ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಆನಂದ ಎಸ್. ಬಡಕುಂದಿ ಸ್ವಾಗತಿಸಿ, ಶಿರೂರು ಪಂಚಾಯತ್ ಪಿಡಿಓ ರಾಜೇಶ್ ವಂದಿಸಿದರು. ತಾಲೂಕು ಪಂಚಾಯತ್ ಸಿಬ್ಬಂದಿ ರೂಪ ಕಾರ್ಯಕ್ರಮ ನಿರೂಪಿಸಿದರು.

    ಮತದಾನ ಜಾಗೃತಿಗೆ ಸಂಬಂಧಿಸಿದಂತೆ ಶಿರೂರಿನ ಮಹಿಳೆಯರು ಲಂಗರು ಪ್ರದೇಶದಲ್ಲಿ ವಿವಿಧ ರಂಗೋಲಿಗಳನ್ನು ಬಿಡಿಸಿದ್ದು ಗಮನ ಸೆಳೆಯಿತು.

    ಉದ್ಘಾಟನಾ ಕಾರ್ಯಕ್ರಮದ ಬಳಿಕ ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶಿರೂರಿನಿಂದ ನಾಯ್ಕನಕಲ್ಲು ಸ್ಕೂಬಾ ಡೈವಿಂಗ್ ಪ್ರದೇಶಕ್ಕೆ ತೆರಳಿ ವಿನೂತನವಾಗಿ ಮತದಾನ ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡರು. ಸಮುದ್ರದ ಮಧ್ಯೆಯೇ ಜಿಲ್ಲಾಧಿಕಾರಿಗಳು ಪ್ರತಿಜ್ಞಾ ವಿಧಿ ಭೋದಿಸಿದರು. ಜಿಲ್ಲಾ ಪಂಚಾಯತ್ ಸಿಇಓ, ಅಪರ ಜಿಲ್ಲಾಧಿಕಾರಿ ಹಾಗೂ ಸಹಾಯಕ ಆಯುಕ್ತೆ ಅವರುಗಳು ಸ್ಕೂಭಾ ಡೈವಿಂಗ್ ಮೂಲಕ ತೆರಳಿ ಮತದಾನ ಜಾಗೃತಿಯ ಬಿತ್ತಿಪತ್ರಗಳನ್ನು ಪ್ರದರ್ಶಿಸಿದರು. ಮತದಾನ ಜಾಗೃತಿ ಬೋರ್ಡುಗಳನ್ನು ಪ್ರದರ್ಶಿಸಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ

    06/07/2026

    ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ

    06/07/2026

    ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ

    06/07/2026
    Leave A Reply Cancel Reply

    8 + nineteen =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.