ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿ ನೇತೃತ್ವದಲ್ಲಿ ತಾಲೂಕಿನ ನಾಯ್ಕನಕಲ್ಲು ಸ್ಕೂಬಾ ಡೈವಿಂಗ್ ಪ್ರದೇಶದಲ್ಲಿ ಶುಕ್ರವಾರ ವಿಭಿನ್ನವಾಗಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಶಿರೂರು ಅಳ್ವೆಗದ್ದೆ ಮೀನುಗಾರಿಕಾ ಲಂಗರು ಪ್ರದೇಶದಿಂದ ಹೊರಟು ನಾಯ್ಕನಕಲ್ಲು ಎಂಬಲ್ಲಿ ತೆರಳಿ ಸಮುದ್ರದ ಮಧ್ಯೆಯೇ ಜಿಲ್ಲಾಧಿಕಾರಿಗಳು ಪ್ರತಿಜ್ಞಾ ವಿಧಿ ಭೋದಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ಕುಮಾರಿ, ಕರಾವಳಿ ಕಾವಲು ಪಡೆಯ ಎಸ್ಪಿ ಮಿಥುನ್, ಸಹಾಯಕ ಚುನಾವಣಾಧಿಕಾರಿ ಮಂಜುನಾಥ್, ಬೈಂದೂರು ತಹಶಿಲ್ದಾರ್ ಪ್ರದೀಪ್ ಅವರು ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಸ್ಥಳಿಯರು ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡರು.
ಸಮುದ್ರದಲ್ಲಿ ಸ್ಕೂಭಾ ಡೈವಿಂಗ್ ಮೂಲಕ ತೆರಳಿ ಮತದಾನ ಜಾಗೃತಿಯ ಬಿತ್ತಿಪತ್ರಗಳನ್ನು ಪ್ರದರ್ಶಿಸಿದರು. ಮತದಾನ ಜಾಗೃತಿ ಬೋರ್ಡುಗಳನ್ನು ಪ್ರದರ್ಶಿಸಲಾಯಿತು.