ಕುಂದಾಪುರ: ಇಂದು ವಿಶ್ವಮಾನ್ಯತೆಯನ್ನು ಪಡೆದಿರುವ ಯೋಗವನ್ನು ನಮ್ಮ ದಿನನಿತ್ಯದ ಜೀವನಕ್ರಮದಲ್ಲಿ ರೂಢಿಸಿಕೊಂಡು ಆರೋಗ್ಯದಾಯಕ ಜೀವನ ನಡೆಸುವ ಜೊತೆಗೆ ಇಂತಹ ಯೋಗ ಸ್ಪರ್ಧೆಯ ಆಯೋಜನೆಯಿಂದ ಯೋಗದ ಬಗ್ಗೆ ಹೆಚ್ಚಿನ ಆಸಕ್ತಿ ಬೆಳಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ರೋಟರಿ ಅಸಿಸ್ಟೆಂಟ್ ಗವರ್ನರ್ ಸತೀಶ್ ಎನ್. ಶೇರೆಗಾರ್ ಹೇಳಿದರು.
ಅವರು ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ಅ.೩೦ರಂದು ರೋಟರಿ ವಲಯ 1ರ ಸದಸ್ಯರಿಗೆ ಏರ್ಪಡಿಸಿದ ಯೋಗ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರೋಟರಿ ವಲಯದ ಕಾರ್ಯದರ್ಶಿ ಸುದರ್ಶನ ಕೆ.ಎಸ್., ಜೋನಲ್ ಲೆಫ್ಟಿನೆಂಟ್ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ, ಕ್ರೀಡೋತ್ಸವ ಸಂಯೋಜಕ ರವಿರಾಜ್ ಶೆಟ್ಟಿ ಉಪಸ್ಥಿತರಿದ್ದರು. ಖ್ಯಾತ ನ್ಯಾಯವಾದಿ ಟಿ. ಬಿ. ಶೆಟ್ಟಿ, ಉದ್ಯಮಿ ಪ್ರಶಾಂತ ತೋಳಾರ್ ಯೋಗ ಸ್ಪರ್ಧಾಳುಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಕಾರ್ಯದರ್ಶಿ ಸಂತೋಷ ಕೋಣಿ ವಂದಿಸಿದರು.