ಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ ಮತ್ತು ಕಾದಂಬರಿ ಪುರಸ್ಕಾರ 2.69 ಲಕ್ಷ ಬಹುಮಾನ ಘೋಷಣೆ

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕನ್ನಡ ಸಾಹಿತ್ಯಲೋಕದಲ್ಲೇ ‘ಅತ್ಯಂತ ಪಾರದರ್ಶಕ ಸ್ಪರ್ಧೆ ಮತ್ತು ಪುರಸ್ಕಾರ’ವಾದ ‘ಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ ಮತ್ತು ಕಾದಂಬರಿ ಪುರಸ್ಕಾರ- 2024’ಕ್ಕೆ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಈ ಸ್ಪರ್ಧೆಯಲ್ಲಿ ರೂ. 2 ಲಕ್ಷ 69 ಸಾವಿರ ಬಹುಮಾನವನ್ನೂ ಘೋಷಿಸಲಾಗಿದೆ. ತಾವುಗಳು ಈ ಸುದ್ದಿಯನ್ನು ನಿಮ್ಮ ಮಾಧ್ಯಮಗಳಲ್ಲಿ ಪ್ರಕಟಿಸಬೇಕೆಂದು ಈ ಮೂಲಕ ಮನವಿ ಮಾಡುತ್ತೇವೆ.

Call us

Click Here

Click here

Click Here

Call us

Visit Now

Click here

ಬುಕ್ ಬ್ರಹ್ಮ “ಸ್ವಾತಂತ್ರ್ಯೋತ್ಸವ ಕಥಾ ಸ್ಫರ್ಧೆ” ಹಾಗೂ 2023ನೇ ಸಾಲಿನಲ್ಲಿ ಪ್ರಕಟವಾದ ಕಾದಂಬರಿಗೆ ಪುರಸ್ಕಾರ ನೀಡಲು ನಿರ್ಧರಿಸಿದೆ.

2023ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಅತ್ಯುತ್ತಮ ಕಾದಂಬರಿಗೆ ಒಂದು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು. ಈ ಒಂದು ಲಕ್ಷದಲ್ಲಿ 75 ಸಾವಿರ ರೂಪಾಯಿ ಲೇಖಕರಿಗೆ ಹಾಗೂ 25 ಸಾವಿರ ಪ್ರಕಾಶಕರಿಗೆ ವಿತರಿಸಲಾಗುತ್ತದೆ. ಮೆಚ್ಚುಗೆ ಪಡೆಯುವ ನಾಲ್ಕು ಕಾದಂಬರಿಗಳಿಗೆ ತಲಾ 5 ಸಾವಿರ ರೂಪಾಯಿ ಬಹುಮಾನ ನೀಡಲಾಗುವುದು. ಈ ಪೈಕಿ 3 ಸಾವಿರ ರೂಪಾಯಿ ಲೇಖಕರಿಗೆ ಹಾಗೂ 2 ಸಾವಿರ ರೂಪಾಯಿಗಳನ್ನು ಪ್ರಕಾಶಕರಿಗೂ ನೀಡಲಾಗುವುದು.

ಕಥಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಕಥೆಗೆ 50 ಸಾವಿರ ರೂಪಾಯಿ ನಗದು ಬಹುಮಾನ ಇರಲಿದೆ. ದ್ವೀತಿಯ ಸ್ಥಾನ ಪಡೆಯುವ ಕಥೆಗೆ 25 ಸಾವಿರ ರೂಪಾಯಿ, ತೃತೀಯ ಸ್ಥಾನಕ್ಕೆ 15 ಸಾವಿರ ರೂಪಾಯಿ ನಗದು ಬಹುಮಾನ ಇರಲಿದೆ. ಉಳಿದಂತೆ ಐದು ಕಥೆಗಳಿಗೆ ತಲಾ 5 ಸಾವಿರ ನಗದನ್ನು ಒಳಗೊಂಡ ಸಮಾಧಾನಕರ ಬಹುಮಾನ ಹಾಗೂ ಅಂತಿಮ ಸುತ್ತಿಗೆ ಆಯ್ಕೆಯಾಗುವ ಉಳಿದ17 ಕಥೆಗಳಿಗೆ ತಲಾ ಎರಡು ಸಾವಿರ ರೂಪಾಯಿ ನೀಡಲಾಗುತ್ತದೆ. ಆಯ್ಕೆಯಾದ ಈ 25 ಕಥೆಗಳನ್ನು ಒಳಗೊಂಡ ಪುಸ್ತಕ ಪ್ರಕಟಿಸಲಾಗುತ್ತದೆ.

ಬುಕ್ ಬ್ರಹ್ಮ ಕಾದಂಬರಿ ಪುರಸ್ಕಾರ 2024ರ ನಿಯಮಗಳು:

Call us

 1. ಕಾದಂಬರಿಯು ಸ್ವತಂತ್ರವಾಗಿರಬೇಕು ಮತ್ತು 2023ರಲ್ಲಿ ಮೊದಲ ಮುದ್ರಣಗೊಂಡಿರಬೇಕು.
 2. ಅನುವಾದ ಹಾಗೂ ಭಾಷಾಂತರಗೊಂಡ ಕಾದಂಬರಿಗಳನ್ನು ಪರಿಗಣಿಸುವುದಿಲ್ಲ.
 3. ಸ್ಪರ್ಧೆಗೆ ಲೇಖಕರು/ ಪ್ರಕಾಶಕರು ಕಾದಂಬರಿಗಳ ನಾಲ್ಕು ಪ್ರತಿಗಳನ್ನು ಕಳುಹಿಸಬೇಕು.
 4. ತೀರ್ಪುಗಾರರ ನಿರ್ಣಯವೇ ಅಂತಿಮ.
 5. ಕಾದಂಬರಿಗಳನ್ನು ಕಳುಹಿಸಲು ಮೇ 1, 2024 ಕೊನೆಯ ದಿನ.
 6. ಕನ್ನಡದ ಪ್ರಮುಖ ಕಾದಂಬರಿಕಾರರು ಹಾಗೂ ವಿಮರ್ಶಕರು ಸ್ಪರ್ಧೆಯ ನಿರ್ಣಾಯಕರಾಗಿರುತ್ತಾರೆ.
 7. ಆಯ್ಕೆಗೆ ಸಂಬಂಧಿಸಿದಂತೆ ‘ಬುಕ್ ಬ್ರಹ್ಮ’ ಆಡಳಿತ ಮಂಡಳಿಯ ನಿರ್ಣಯವೇ ಅಂತಿಮ.
 8. ಜುಲೈ 1, 2024 ಮಂಗಳವಾರದಂದು ಅಂತಿಮ ಸುತ್ತನ್ನು ಪ್ರವೇಶಿಸುವ 5 ಕಾದಂಬರಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು.
 9. ಮೆಚ್ಚುಗೆ ಪಡೆಯುವ ನಾಲ್ಕು ಕಾದಂಬರಿಗಳಿಗೆ ತಲಾ 5 ಸಾವಿರ ರೂಪಾಯಿ ಬಹುಮಾನ ನೀಡಲಾಗುವುದು. ಈ ಪೈಕಿ 3 ಸಾವಿರ ರೂಪಾಯಿ ಲೇಖಕರಿಗೆ ಹಾಗೂ 2 ಸಾವಿರ ರೂಪಾಯಿಗಳನ್ನು ಪ್ರಕಾಶಕರಿಗೂ ನೀಡಲಾಗುವುದು.
 10. ಆಗಸ್ಟ್ 9, 10, 11, 2024ರಂದು ನಡೆಯಲಿರುವ ಬುಕ್ ಬ್ರಹ್ಮ ಸಾಹಿತ್ಯ ಉತ್ಸವದಲ್ಲಿ ಪುರಸ್ಕೃತರ ಘೋಷಣೆ ಮತ್ತು ಪ್ರಶಸ್ತಿ ವಿತರಣೆ ಮಾಡಲಾಗುವುದು.
 11. ಬುಕ್‌ಬ್ರಹ್ಮ ಪ್ರೈವೇಟ್ ಲಿಮಿಟೆಡ್ (Book Brahma Private Limited), ಫರ್ಬೆಂಡನ್ ಕಮ್ಯುನಿಕೇಷನ್ ಪ್ರೈವೇಟ್ ಲಿಮಿಟೆಡ್ (Verbinden Communication Private Limited) ಸಂಸ್ಥೆಗಳ ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರು ಸ್ಫರ್ಧೆಯಲ್ಲಿ ಭಾಗವಹಿಸುವಂತಿಲ್ಲ.
 12. ಅಂತಿಮ ಸುತ್ತಿಗೆ ಆಯ್ಕೆಯಾದ ಕಾದಂಬರಿಕಾರರು ಬಹುಮಾನ ವಿತರಣಾ ಸಮಾರಂಭದಲ್ಲಿ ತಪ್ಪದೇ ಭಾಗವಹಿಸಬೇಕು.
 13. ಕಾದಂಬರಿಗಳ ನಾಲ್ಕು ಪ್ರತಿಗಳನ್ನು ಪ್ರಧಾನ ಸಂಪಾದಕರು, ಬುಕ್ ಬ್ರಹ್ಮ-ಕನ್ನಡ ಮೂರನೇ ಮಹಡಿ, ಆರ್. ಕೆ ಕಾಂಪ್ಲೆಕ್ಸ್, ಕೆಎಸ್‌ಎಸ್‌ಐಡಿಸಿ ಆವರಣ ಎಲೆಕ್ಟ್ರಾನಿಕ್ಸ್ ಸಿಟಿ ಮೊದಲ ಹಂತ, ಬೆಂಗಳೂರು-560 100 ವಿಳಾಸಕ್ಕೆ ಮೇ 1 ರೊಳಗೆ ಕಳುಹಿಸಬೇಕು.
  ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 78926 08118

ಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ 2024ರ ನಿಯಮಗಳು:

 1. ಕಥೆಯು ಸ್ವತಂತ್ರವಾಗಿರಬೇಕು. ಅನುವಾದ, ಅನುಕರಣವಾಗಿರಬಾರದು.
 2. ಕಥೆಯು ಅಪ್ರಕಟಿತವಾಗಿರಬೇಕು. ಮುದ್ರಣ ಅಥವಾ ಯಾವುದೇ ವಿದ್ಯುನ್ಮಾನ ಮಾಧ್ಯಮ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿರಬಾರದು.
 3. ಕಥೆಗೆ ಯಾವುದೇ ರೀತಿಯ ಪದಮಿತಿ ಇರುವುದಿಲ್ಲ.
 4. ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ವಯಸ್ಸಿನ ನಿರ್ಬಂಧ ಇಲ್ಲ.
 5. ಹಸ್ತಪ್ರತಿ ಅಥವಾ ಟೈಪ್ ಮಾಡಿದ ಕಥೆಯಿರುವ ಪುಟಗಳಲ್ಲಿ ತಮ್ಮ ಹೆಸರನ್ನು ದಾಖಲಿಸಬಾರದು. ಕಥೆ ಮುಗಿದ ನಂತರ ಪ್ರತ್ಯೇಕ ಪುಟದಲ್ಲಿ ತಮ್ಮ ಹೆಸರು, ಪೂರ್ಣ ವಿಳಾಸ ಮತ್ತು ಮೊಬೈಲ್ ಸಂಖ್ಯೆ ಇರಬೇಕು.
 6. ಕಥೆಗಾರರು ನಿಬಂಧನೆಗಳಿಗೆ ಒಪ್ಪಿದ ಮತ್ತು ಸಹಿ ಮಾಡಿದ ಪ್ರತ್ಯೇಕ ಒಂದು ಪತ್ರ ಇಡಬೇಕು.
 7. ಬುಕ್‌ಬ್ರಹ್ಮ ಪ್ರೈವೇಟ್ ಲಿಮಿಟೆಡ್ (Book Brahma Private Limited), ಫರ್ಬೆಂಡನ್ ಕಮ್ಯುನಿಕೇಷನ್ ಪ್ರೈವೇಟ್ ಲಿಮಿಟೆಡ್ (Verbinden Communication Private Limited) ಸಂಸ್ಥೆಗಳ ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರು ಸ್ಫರ್ಧೆಯಲ್ಲಿ ಭಾಗವಹಿಸುವಂತಿಲ್ಲ.
 8. ಕನ್ನಡದ ಪ್ರಮುಖ ಕಥೆಗಾರರು/ವಿಮರ್ಶಕರು ಸ್ಪರ್ಧೆಯ ನಿರ್ಣಾಯಕರಾಗಿರುತ್ತಾರೆ.
 9. ಆಯ್ಕೆಗೆ ಸಂಬಂಧಿಸಿದಂತೆ ‘ಬುಕ್ ಬ್ರಹ್ಮ’ ಆಡಳಿತ ಮಂಡಳಿಯ ನಿರ್ಣಯವೇ ಅಂತಿಮ.
 10. ಕಥೆಗಳನ್ನು ಕಳುಹಿಸಲು ಕೊನೆಯ ದಿನ ಬುಧವಾರ, ಮೇ 1, 2024.
 11. ಜುಲೈ 1, 2024 ರಂದು ಅಂತಿಮ ಸುತ್ತನ್ನು ಪ್ರವೇಶಿಸುವ 25 ಕಥೆಗಳ ಪಟ್ಟಿಯನ್ನು ಪ್ರಕಟಿಸಲಾಗುವುದು.
 12. 2024 ರ ಆಗಸ್ಟ್ 9, 10, 11 ರಂದು ನಡೆಯಲಿರುವ ಬುಕ್ ಬ್ರಹ್ಮ ಸಾಹಿತ್ಯ ಉತ್ಸವದಲ್ಲಿ ಅಂತಿಮ ಸುತ್ತಿಗೆ ಆಯ್ಕೆಯಾದ ಕಥೆಗಳ ಘೋಷಣೆ ಮತ್ತು ಪ್ರಶಸ್ತಿ ವಿತರಣೆ ಮಾಡಲಾಗುವುದು.
 13. ಅಂತಿಮ ಸುತ್ತಿಗೆ ಆಯ್ಕೆಯಾದ 25 ಕಥೆಗಳನ್ನು ಪುಸ್ತಕದ ರೂಪದಲ್ಲಿ ಪ್ರಕಟಿಸಲಾಗುತ್ತದೆ. ಈ 25 ಕಥೆಗಳ ಪೈಕಿ ಬಹುಮಾನ ಪಡೆಯದೇ ಉಳಿಯುವ 17 ಕಥೆಗಳಿಗೆ ತಲಾ 2000 ರೂಪಾಯಿ ಗೌರವಧನ ನೀಡಲಾಗುವುದು. ಈ ಎಲ್ಲಾ 25 ಕಥೆಗಳ ಹಕ್ಕುಸ್ವಾಮ್ಯ ಕಥೆಗಾರರು ಮತ್ತು ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಇಬ್ಬರಿಗೂ ಜಂಟಿಯಾಗಿ (ಶೇಕಡಾ 50) ಸೇರಿರುತ್ತದೆ.
 14. ಅಂತಿಮ ಸುತ್ತಿಗೆ ಆಯ್ಕೆಯಾದ ಕಥೆಗಾರರು ಬಹುಮಾನ ವಿತರಣಾ ಸಮಾರಂಭದಲ್ಲಿ ತಪ್ಪದೇ ಭಾಗವಹಿಸಬೇಕು.
 15. ಒಬ್ಬರು ಒಂದು ಕಥೆಯನ್ನು ಮಾತ್ರ ಕಳಿಸಬೇಕು. ಕಾದಂಬರಿ ಸ್ಪರ್ಧೆಗೆ ಪುಸ್ತಕ ಕಳುಹಿಸಿದವರೂ ಕೂಡ ಕಥೆಗಳನ್ನು ಕಳುಹಿಸಬಹುದು.
 16. ಕಥೆಗಳನ್ನು ಈ-ಮೇಲ್ ಮೂಲಕ (ನುಡಿ/ಯೂನಿಕೋಡ್ ಫಾಂಟ್ ಬಳಸಿ ಟೈಪ್ ಮಾಡಿದ ಪ್ರತಿ) bbks2024@bookbrahma.com ಅಥವಾ ಹಸ್ತಪ್ರತಿಯನ್ನು ಪ್ರಧಾನ ಸಂಪಾದಕರು, ಬುಕ್ ಬ್ರಹ್ಮ ಕನ್ನಡ ಮೂರನೇ ಮಹಡಿ, ಆರ್.ಕೆ ಕಾಂಪ್ಲೆಕ್ಸ್, ಕೆಎಸ್‌ಎಸ್‌ಐಡಿಸಿ ಆವರಣ ಎಲೆಕ್ಟ್ರಾನಿಕ್ಸ್ ಸಿಟಿ, ಮೊದಲ ಹಂತ, ಬೆಂಗಳೂರು-560100 ಕ್ಕೆ ಕಳುಹಿಸಿಕೊಡಬಹುದು.
  ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 78926 08118

ಹೆಚ್ಚಿನ ಮಾಹಿತಿಗೆ ಈ ಕೆಳಗಿನ ಲಿಂಕ್ ಕ್ಲಿಕ್ಕಿಸಿ: https://www.bookbrahma.com/news/2024ne-salina-bookbrahma-katha-spardhe-kadambari-puraskarakke-ahvana

Leave a Reply

Your email address will not be published. Required fields are marked *

18 + seven =