ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಭೇಟಿಯಾದ ಕುಂದಾಪುರ ಬಿಜೆಪಿ ಪ್ರಮುಖರು

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕುಂದಾಪುರ ಬಿಜೆಪಿಯ ನೂತನ ಪದಾಧಿಕಾರಿಗಳ ತಂಡವು ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಇತ್ತಿಚಿಗೆ ಭೇಟಿ ನೀಡಿ ಲೋಕಸಭಾ ಚುನಾವಣೆಯ ಕಾರ್ಯತಂತ್ರಗಳ ಬಗ್ಗೆ ಸಲಹೆ ಸೂಚನೆ ಪಡೆದುಕೊಂಡಿದೆ.

Call us

Click Here

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಭೇಟಿ ಬಳಿಕ, ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಭೇಟಿ ನೀಡಿರುವುದು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಬಿಜೆಪಿ ಯುವ ಪಡೆ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿಯಾಗಿರುವು ಮತ್ತು ಕುತೂಹಲ ಹುಟ್ಟುಹಾಕಿದೆ.

ಕುಂದಾಪುರ ಮಂಡಲ ಬಿಜೆಪಿ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಹಾಗೂ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ನೇತೃತ್ವದಲ್ಲಿ ಕುಂದಾಪುರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್.ಕೆ.ಎಸ್, ಕುಂದಾಪುರ, ನಿಕಟಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಪಕ್ಷದ ಮುಖಂಡರಾದ ಸಂಪತ್ ಶೆಟ್ಟಿ ಶಾನಾಡಿ, ಪ್ರವೀಣ್ ಶೆಟ್ಟಿ ವಂಡಾರು ಹಾಗೂ ವಿವಿಧ ಮೋರ್ಚಾಗಳ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Leave a Reply