Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪೊಳ್ಳು ಹಿಂದುತ್ವವಾದಿಗಳಿಗೆ ಕರಾವಳಿಗರು ಆಸ್ಪದ ನೀಡಲ್ಲ: ಬಿ.ವೈ.ರಾಘವೇಂದ್ರ
    ಊರ್ಮನೆ ಸಮಾಚಾರ

    ಪೊಳ್ಳು ಹಿಂದುತ್ವವಾದಿಗಳಿಗೆ ಕರಾವಳಿಗರು ಆಸ್ಪದ ನೀಡಲ್ಲ: ಬಿ.ವೈ.ರಾಘವೇಂದ್ರ

    Updated:02/04/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಪಕ್ಷದ ಚೌಕಟ್ಟಿನಲ್ಲಿ ಪಕ್ಷದ ಅಭ್ಯರ್ಥಿ ಘೋಷಣೆ ಆದ ನಂತರದಲ್ಲಿ ಅದೇ ಅಧಿಕೃತವಾಗಲಿದೆ. ಹಿಂದುತ್ವವಾದ ವಿಚಾರದಲ್ಲಿ ನಮ್ಮ ಮೈಯಲ್ಲಿ ಹರಿಯುತ್ತಿರುವ ಒಂದೊಂದು ಹನಿ ರಕ್ತವೂ ಕೂಡ ಹಿಂದುವೇ ಆಗಿದೆ. ದೇಶದಲ್ಲಿರುವ ಎಲ್ಲರೂ ಹಿಂದುಗಳೇ ಆಗಿದ್ದಾರೆ. ಪೊಳ್ಳು ಹಿಂದುತ್ವ ವಾದಿಗಳಿಂದ ನಮಗೆ ಪಾಠ ಬೇಕಾಗಿಲ್ಲ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಗುಡುಗಿದರು.

    Click Here

    Call us

    Click Here

    ನಾಗೂರಿನಲ್ಲಿ ಮಂಗಳವಾರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಬಿ. ವೈ.ರಾಘವೇಂದ್ರ ಎಂಬುದನ್ನು ಪಕ್ಷವೇ ಅಧಿಕೃತವಾಗಿ ಘೋಷಣೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ, ಅವರ ಪಕ್ಕದಲ್ಲೇ ನನ್ನನ್ನು ನಿಲ್ಲಿಸಿಕೊಂಡು ಪ್ರಚಾರವನ್ನು ಮಾಡಿ, ರಾಘವೇಂದ್ರ ಅವರಿಗೆ ಹಾರೈಸಿ, ಆಶೀರ್ವಾದ ಮಾಡಿದ್ದಾರೆ. ಇಡೀ ಬಿಜೆಪಿ, ಪರಿವಾರ ನಮ್ಮ ಜತೆಗೆ ಇದೆ ಎಂದರು.

    ದೇಶದಲ್ಲಿರುವ ಎಲ್ಲರೂ ಹಿಂದೂ ವಾದಿಗಳು. ನಾನು ಮಾತೃವಲ್ಲ, ಬಿ.ಎಸ್. ಯಡಿಯೂರಪ್ಪನವರು

    ಅಯೋಧ್ಯೆಯ ರಾಮಜನ್ಮಭೂಮಿ ಆಂದೋಲನದ ಕರಸೇವಕರಾಗಿ ತಮ್ಮನ್ನು ತೊಡಗಿಸಿಕೊಂಡು, ಆರೆಸ್ಸೆಸ್ ಪ್ರಚಾರಕರಾಗಿ ಹುಬ್ಬಳ್ಳಿ ಈದ್ಗಾ ಮೈದಾನ ಹೋರಾಟ ಇರಬಹುದು, ಮುರಳಿ ಮನೋಹರ್ ಜೋಶಿಯವರು ಕರೆಕೊಟ್ಟ ಸಂದರ್ಭದಲ್ಲಿ ಕಾಶ್ಮೀರದ ಲಾಲ್ ಚೌಕ್ ನಲ್ಲಿ ಉಗ್ರಗಾಮಿಗಳ ದಾಳಿಯ ಮಧ್ಯದಲ್ಲಿ ತ್ರಿವರ್ಣ ಧ್ವಜ ಹಾರಿಸುವ ಹೋರಾಟದಲ್ಲಿ ಭಾಗವಹಿಸಿದ್ದರು. ಹೀಗಾಗಿ ಪ್ರಚಾರಕ್ಕಾಗಿ ಹಿಂದುತ್ವ ಪ್ರದರ್ಶನ ಮಾಡುವ ಅವಶ್ಯಕತೆ ನಮಗಿಲ್ಲ ಎಂದರು.

    ಯಡಿಯೂಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ತಂದಿರುವ ಒಂದೊಂದು ಯೋಜನೆಯನ್ನು ಜನ ಈಗಲೂ ನೆನಪು ಮಾಡಿಕೊಳ್ಳುತ್ತಾರೆ. ಗೋ ಹತ್ಯೆ ನಿಷೇಧಕ್ಕೆ ಬಿಗಿ ಕಾನೂನು ತಂದಿದ್ದಾರೆ. ಭಾಗ್ಯ ಲಕ್ಷ್ಮೀ ಯೋಜನೆ ಮೂಲಕ ಹೆಣ್ಣು ಭ್ರೂಣ ಹತ್ಯೆಗೆ ಕಡಿವಾಣ ಹಾಕುವ ದೊಡ್ಡ ಪ್ರಯತ್ನ ಮಾಡಿದ್ದಾರೆ. ಕನಕದಾಸ ಜಯಂತಿ, ವಾಲ್ಮೀಕಿ ಜಯಂತಿ ಸೇರಿ ಅನೇಕ ಮಹನೀಯರ ಜಯಂತಿ, ಎಲ್ಲ ಮಠ ಮಂದಿರಗಳ ಅಭಿವೃದ್ಧಿ ಕಾರ್ಯಕ್ಕೆ ಆದ್ಯತೆ ನೀಡಿದ್ದರು. ಚುನಾವಣೆಗಾಗಿ ಹಿಂದುತ್ವ ನಮ್ಮದಲ್ಲ. ವೋಟಿಗಾಗಿ ಹಿಂದುತ್ವ ಬಳಸಿಕೊಳ್ಳುವವರಿಂದ ಪಾಠ ಅಗತ್ಯವಿಲ್ಲ ಎಂದು ಹೇಳಿದರು.

    Click here

    Click here

    Click here

    Click Here

    Call us

    Call us

    ಎರಡು ವಾರದಲ್ಲಿ ಏನಾಯ್ತು?
    ಯಡಿಯೂರಪ್ಪನವರ ಕುಟುಂಬ ಎಲ್ಲ ಸಮಾಜವನ್ನು ಸಮಾನವಾಗಿ ಕಂಡಿದೆ ಮತ್ತು ಕಾಣುತ್ತಿದೆ ಎಂದು ಕಳೆದ ಎರಡು ವಾರದ ಕೆಳಗೆ ಈಶ್ವರಪ್ಪನವರು ಶಿಕಾರಿಪುರಕ್ಕೆ ಬಂದಿದ್ದಾಗ ಹೇಳಿದ್ದರು. ಐದು ಲಕ್ಷಕ್ಕೂ ಆಧಿಕ ಅಂತರದಲ್ಲಿ ರಾಘವೇಂದ್ರ ಅವರನ್ನು ಗೆಲ್ಲಿಸಬೇಕು ಎಂದು ಅವರೇ ಹೇಳಿದ್ದರು.ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಒಳ್ಳೆಯ ಕಾರ್ಯ ಮಾಡುತ್ತಿದ್ದಾರೆ ಎಂದು ಅವರೇ ಹಾರೈಸಿದ್ದರು. ಕೇವರ ಎರಡೇ ವಾರದಲ್ಲಿ ಈಶ್ವರಪ್ಪನವರಲ್ಲಿ ಈ ಬದಲಾವಣೆ ಏಕಾಯಿತು? ಇದನ್ನೆಲ್ಲವನ್ನು ಮತದಾರರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    10 + 1 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.