ಉಡುಪಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಆಯ್ಕೆಯಲ್ಲಿ ಅಸಮಾಧಾನ: ಆದೇಶ ತಡೆ ಹಿಡಿದ ಹೈಕಮಾಂಡ್‌

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಉಡುಪಿ ಜಿಲ್ಲಾ ಕಾಂಗ್ರೆಸ್‌ ಘಟಕಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದ್ದ ಆದೇಶವನ್ನು ಸದ್ಯ ಕಾಂಗ್ರೆಸ್‌ ಹೈಕಮಾಂಡ್‌ ತಡೆ ಹಿಡಿದಿದೆ.

Call us

Click Here

ಎರಡು ದಿನಗಳ ಹಿಂದಷ್ಟೇ ಕಿಶನ್‌ ಹೆಗ್ಡೆ ಕೊಳ್ಕೆಬೈಲು ಅವರು ಉಡುಪಿ ಜಿಲ್ಲಾಧ್ಯಕ್ಷನ್ನಾಗಿ ನೇಮಕ ಮಾಡಲಾಗಿತ್ತು. ಆದರೆ ಅವರ ಆಯ್ಕೆ ಕಾಂಗ್ರೆಸ್‌ ವಲಯದಲ್ಲಿ ಭಾರಿ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಾಣದೀಪ್‌ ಸಿಂಗ್‌ ಸುರ್ಜೇವಾಲ ಅವರಿಗೆ ಪತ್ರ ಬರೆದು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದ್ದಾರೆ.

ಸದ್ಯ ಅಶೋಕ್‌ ಕುಮಾರ್‌ ಕೊಡವೂರು ಅವರೇ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ನಡೆದಿರುವ ಈ ಪ್ರಕ್ರಿಯೆಯಿಂದ ಜಿಲ್ಲಾ ಕಾಂಗ್ರೆಸ್‌ನಲ್ಲಿ ಆಂತರಿಕವಾಗಿದ್ದ ಬೇಗುದಿ ಹೊರಬಂದಂತಾಗಿದೆ.

Leave a Reply