ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪಿಯು ಕಾಲೇಜಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ 100 ಪ್ರತಿಶತ ಫಲಿತಾಂಶ ದಾಖಲಿಸಿದ್ದಾರೆ.
386 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 226 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, (ಡಿಸ್ಟ್ರಿಂಕ್ಷನ್) ಉತ್ತೀರ್ಣರಾಗಿದ್ದು, ಈ ವಿದ್ಯಾರ್ಥಿಗಳು ಅತ್ಯದಿಕ ಅಂಕಗಳನ್ನು ಪಡೆದು ಸಾಧನೆ ಮೆರೆದಿದ್ದಾರೆ.
ಕಾಲೇಜು ಆರಂಭಗೊಂಡ 2ನೇ ವರ್ಷದಲ್ಲಿಯೇ ಉತ್ತಮ ದಾಖಲಾತಿ ಹೊಂದಿರುವುದಲ್ಲದೇ ಫಲಿತಾಂಶದಲ್ಲಿಯೂ ಉತ್ತಮ ಸಾಧನೆ ಮಾಡಿರುವುದು ಖುಷಿ ತಂದಿದೆ. ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಕ್ರೀಡೆ, ಕಲೆ, ಸಾಹಿತ್ಯ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಿರುವುದು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಪೂರಕವಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.