ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು 2023-24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದೆ.
ಸಂಸ್ಥೆಯ 386 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,226 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ(distinction) ಉತ್ತೀರ್ಣರಾಗಿದ್ದಾರೆ.
ಪ್ರತೀಕ್ಷಾ 589 (ವಾಣಿಜ್ಯ ವಿಭಾಗ), ಪ್ರಜ್ವಲ್ ಪೂಜಾರಿ 588 (ವಿಜ್ಞಾನ ವಿಭಾಗ), ಪವಿತ್ರಾ 588(ವಿಜ್ಞಾನ ವಿಭಾಗ),ಲಾವಣ್ಯ 588 (ವಾಣಿಜ್ಯ ವಿಭಾಗ) ಐಶ್ವರ್ಯ ವೈದ್ಯ 587(ವಿಜ್ಞಾನ ವಿಭಾಗ) ಅತಿ ಹೆಚ್ಚು ಅಂಕ ಗಳಿಸಿದ್ದಾರೆ.
155 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ,ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.