ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಹಿಂದುಗಳಲ್ಲಿ ಒಗ್ಗಟ್ಟು ಮೂಡಿಸಲು ಹಾಗೂ ಧಾರ್ಮಿಕ ಪ್ರಜ್ಞೆ ಬೆಳೆಸುವ ಉದ್ದೇಶದಿಂದ ಗಂಗೊಳ್ಳಿಯ ಹಿಂದು ಸಮಾಜದ ಮುಖಂಡರು ಪ್ರಾರಂಭಿಸಿದ ಸೇವಾ ಸಂಘವು ಸ್ಥಾಪಕರ ಆಶಯದಂತೆ ಸತ್ಕಾರ್ಯ, ಸತ್ಕರ್ಮಗಳನ್ನು ನಡೆಸುತ್ತಿರುವುದು ಶ್ಲಾಘನೀಯ. ಸಾರ್ವಜನಿಕ ಶ್ರೀ ಶಾರದೋತ್ಸವದ ಮೂಲಕ ಎಲ್ಲಾ ಜಾತಿ ವರ್ಗದವರನ್ನು ಒಂದುಗೂಡಿಸಿ ಜನರಲ್ಲಿ ಸದಾಭಿಪ್ರಾಯವನ್ನು ಬೆಳೆಸುವ ಮೂಲಕ ಸಮಾಜದಲ್ಲಿ ಒಗ್ಗೂಟ್ಟು ಮೂಡಿಸುತ್ತಿರುದು ಅಭಿನಂದನೀಯ ಎಂದು ಸೇವಾ ಸಂಘದ ಸ್ಥಾಪಕ ಅಧ್ಯಕ್ಷ ಎಂ. ವಾಮನ ಪೈ ಹೇಳಿದರು.
ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಸುವರ್ಣ ಮಹೋತ್ಸವ – 2024 ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶ್ರೀ ಶಾರದಾ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಸತೀಶ್ ಜಿ. ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ, ಶ್ರೀ ಸೀತಾರಾಮಚಂದ್ರ ದೇವಸ್ಥಾನದ ಅಧ್ಯಕ್ಷ ರಾಜೇಶ ಎಂ.ಜಿ. ಮತ್ತು ಮಹಿಳಾ ಮಂಡಳಿ ಅಧ್ಯಕ್ಷೆ ಸವಿತಾ ಯು.ದೇವಾಡಿಗ ಶುಭಾಶಂಸನೆಗೈದರು. ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಮಡಿ ಶಂಕರ ಖಾರ್ವಿ, ಶ್ರೀ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಬಾಬು ಪೂಜಾರಿ, ಶ್ರೀ ಇಂದುಧರ ದೇವಸ್ಥಾನದ ಅಧ್ಯಕ್ಷ ಗುರುರಾಜ್ ಸುವರ್ಣ, ಉಪಾಧ್ಯಕ್ಷ ಸಂದೇಶ ಜಿ., ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತಿನ್ ಖಾರ್ವಿ, ಖಜಾಂಚಿ ನಾರಾಯಣ ಪೂಜಾರಿ, ಮಹಿಳಾ ಮಂಡಳಿ ಕಾರ್ಯದರ್ಶಿ ಸುಜಾತ ಬಾಬು ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.
ಸುವರ್ಣ ಮಹೋತ್ಸವದ ಚಾಲನಾ ಸಮಾರಂಭದ ಪ್ರಯುಕ್ತ ಗಣಹೋಮ, ಲಕ್ಷ್ಮೀಪೂಜೆ ಹಾಗೂ ಗೋಪೂಜೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಪುರೋಹಿತರಾದ ಜಿ.ರಾಘವೇಂದ್ರ ನಾರಾಯಣ ಆಚಾರ್ಯ ನೇತೃತ್ವದಲ್ಲಿ ನಡೆಯಿತು.
ಸಮಿತಿ ಅಧ್ಯಕ್ಷ ಸತೀಶ್ ಜಿ. ಸ್ವಾಗತಿಸಿದರು. ಗೌರವಾಧ್ಯಕ್ಷ ಬಿ. ಲಕ್ಷ್ಮೀಕಾಂತ ಮಡಿವಾಳ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಂದರ ಜಿ. ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಶ್ರೀಧರ ಸಕ್ಲಾತಿ ವಂದಿಸಿದರು.