ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕಲಾಶ್ರೀ ಶಿಕ್ಷಣಪ್ರೇಮಿ ಬಳಗ ಗಂಗೊಳ್ಳಿ ಮತ್ತು ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಶಾಲೆಯ ಸಭಾಂಗಣದಲ್ಲಿ ಬುಧವಾರ ನಡೆಯಿತು.
ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಸೇವೆಯಲ್ಲಿ ಅನುಪಮ ಸೇವೆ ಸಲ್ಲಿಸಿದ ಸಹಶಿಕ್ಷಕಿ, ಗಾಯಕಿ ಅಕ್ಷತಾ ವಿನಯ್, ಸಹಶಿಕ್ಷಕಿ ಭೂದೇವಿ, ಕಳೆದ 30 ವರ್ಷಗಳಿಂದ ಶ್ರೀ ಇಂದುಧರ ದೇವಸ್ಥಾನದಲ್ಲಿ ಸ್ವಚ್ಛತಾ ಸೇವೆ ಮಾಡುತ್ತಿರುವ ಸರೋಜ ಜಿ.ಟಿ. ಮತ್ತು ಮೇಲ್ಗಂಗೊಳ್ಳಿ ಅಂಗನವಾಡಿ ಕೇಂದ್ರದ ಸಹಾಯಕಿ ಮೂಕಾಂಬು ಅವರನ್ನು ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ರೇಖಾ ಖಾರ್ವಿ, ಸೀಮಾ ಖಾರ್ವಿ, ಅಂಗನವಾಡಿ ಕಾರ್ಯಕರ್ತೆಯರಾದ ಶೋಭಾ, ಕಮಲಾ, ಶೇಷಮ್ಮ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಒಕ್ಕೂಟದ ಅಧ್ಯಕ್ಷೆ ಸುಮಿತ್ರಾ ಜಿ. ಮೊದಲಾದವರು ಉಪಸ್ಥಿತರಿದ್ದರು.
ಸುಮಿತ್ರಾ ಜಿ. ಸ್ವಾಗತಿಸಿದರು. ರೇಖಾ ಖಾರ್ವಿ ಕಾರ್ಯಕ್ರಮ ನಿರ್ವಹಿಸಿದರು. ಕಮಲಾ ವಂದಿಸಿದರು.