ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಫಂಗಕ್ಷನಲ್ ಇಂಗ್ಲೀಷ್ ಸರ್ಟಿಫಿಕೇಟ್ ಕೋರ್ಸಿನ ವಿದ್ಯಾರ್ಥಿಗಳು ವಿಸ್ತರಣಾ ಚಟುವಟಿಕೆಯ ಅಂಗವಾಗಿ ತಲ್ಲೂರಿನ ನಾರಾಯಣ ವಿಶೇಷ ಚೇತನ ವಿದ್ಯಾರ್ಥಿಗಳಿಗಾಗಿ ವಿವಿಧ ವಿನೋದಾವಳಿ ಹಾಗೂ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ, ಸಹಾಯಹಸ್ತ ನೀಡಿದರು.
ಈ ಸಂದರ್ಭದಲ್ಲಿ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ದೀಪಿಕಾ ಜಿ., ಉಪನ್ಯಾಸಕರಾದ ಸ್ಟಾಲಿನ್ ಡಿಸೋಜಾ, ರವೀನಾ ಸಿ. ಪೂಜಾರಿ, ಸ್ವಾತಿ ರಾವ್, ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಮ್ಯಾನೆಜಿಂಗ್ ಟ್ರಸ್ಟಿ ಸುರೇಶ್ ಟಿ., ಟ್ರಸ್ಟಿ ಮನೋರಮಾ ಹಾಜರಿದ್ದರು.