ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪ ಪುತ್ರಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಗುರುದತ್ ಹೆಗಡೆ ಅವರಿಗೆ ಗೀತಾ ಶಿವರಾಜಕುಮಾರ್ ಅವರು ಉಮೇದುವಾರಿಕೆ ಅರ್ಜಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅವರ ಪತಿ ನಟ ಶಿವರಾಜಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸೇರಿದಂತೆ ಇನ್ನಿತರ ಕಾಂಗ್ರೆಸ್ ಮುಖಂಡರು ಹಾಜರಿದ್ದರು.
ಇದಕ್ಕೂ ಪೂರ್ವದಲ್ಲಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಮೆರವಣಿಗೆ ಜರುಗಿತು.