ಗಂಗೊಳ್ಳಿ: ಡಾ. ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಭೀಮರಾವ್ ರಾಮ್ಜೀ ಅಂಬೇಡ್ಕರ್ ಅವರು ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು. ಭಾರತದ ಸಂವಿಧಾನವನ್ನು ರಚಿಸಿದ ಇವರನ್ನು ಸಂವಿಧಾನ ಶಿಲ್ಪಿ ಎಂದು ಕರೆಯುತ್ತಾರೆ. ಸ್ವತಂತ್ರವಾದ ಅನೇಕ ದೇಶಗಳು ಸಾರ್ವಜನಿಕರ ಹಕ್ಕುಗಳನ್ನು ಕಾಪಾಡಲು ಅಸಮರ್ಥರಾದ ಹಿನ್ನೆಲೆಯಲ್ಲಿ ಭಾರತದ ಸಂವಿಧಾನ ಶ್ರೇಷ್ಠ ಸಂವಿಧಾನ ಎಂಬುದನ್ನು ಇಡೀ ಜಗತ್ತೇ ಒಪ್ಪಿಕೊಂಡಿದೆ ಹಾಗೂ ಇದಕ್ಕೆ ಡಾ. ಬಿ.ಆರ್.ಅಂಬೇಡ್ಕರ್ ಕೊಡುಗೆಯನ್ನು ಎಲ್ಲರೂ ಸ್ಮರಿಸಿಕೊಳ್ಳುತ್ತಿದ್ದಾರೆ. ಡಾ.ಅಂಬೇಡ್ಕರ್ ಅವರು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಮತ್ತು ಸ್ವಾತಂತ್ರ್ಯದ ನಂತರದ ಸುಧಾರಣೆಗಳಲ್ಲಿ ಕೊಡುಗೆ ನೀಡಿದ್ದಾರೆ ಎಂದು ಪತ್ರಕರ್ತ ಬಿ.ರಾಘವೇಂದ್ರ ಪೈ ಹೇಳಿದರು.

Call us

Click Here

ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ ಮತ್ತು ವಿಶ್ವನಾಥ ಯುವಕ ಮಂಡಲ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿ ಶ್ರೀ ಇಂದುಧರ ಸಭಾಭವನದಲ್ಲಿ ಭಾನುವಾರ ಜರುಗಿದ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಡಾ.ಅಂಬೇಡ್ಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಶ್ರೀ ಇಂದುಧರ ದೇವಸ್ಥಾನದ ಅಧ್ಯಕ್ಷ ಗುರುರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದೇವಸ್ಥಾನದ ಉಪಾಧ್ಯಕ್ಷ ಸಂದೇಶ ಜಿ., ಮಾಜಿ ಅಧ್ಯಕ್ಷ ಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.

ದೇವಸ್ಥಾನದ ಮಾಜಿ ಅಧ್ಯಕ್ಷ ಸುಂದರ ಜಿ. ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Leave a Reply