ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರು ಶಿವಮೊಗ್ಗದಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷರು ಉಪಸ್ಥಿತರಿದ್ದರು.