ಕುಂದಾಪುರ: ಪ್ರತಾಪ್ಚಂದ್ರ ಶೆಟ್ಟಿ – ಜೆ.ಪಿ. ಹೆಗ್ಡೆ ಭೇಟಿ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ವಿಧಾನಪರಿಷತ್ ಮಾಜಿ ಸಭಾಪತಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಕೆ.ಪ್ರತಾಪಚಂದ್ರ ಶೆಟ್ಟಿ ಅವರನ್ನು ಭೇಟಿಯಾದ ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರು ಚುನಾವಣಾ ಕಾರ್ಯತಂತ್ರದ ಕುರಿತು ಸಮಾಲೋಚನೆ ನಡೆಸಿದರು.

Click Here

Call us

Click Here

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರ ನೇತೃತ್ವದಲ್ಲಿ ಹೈಕಾಡಿಯಲ್ಲಿನ ಪ್ರತಾಪಚಂದ್ರ ಶೆಟ್ಟಿ ಅವರ ನಿವಾಸಕ್ಕೆ ತೆರಳಿದ್ದ ಜಿಲ್ಲಾ ಕಾಂಗ್ರೆಸ್ ಪಕ್ಷದ ಪ್ರಮುಖರು, ಅವರೊಂದಿಗೆ ಕುಶಲೋಪರಿ ನಡೆಸಿ ಲೋಕಸಭಾ ಚುನಾವಣೆಯ ಬಗ್ಗೆ ಸಮಾಲೋಚನೆ ನಡೆಸಿದರು.

ಪಕ್ಷದ ಪ್ರಮುಖರಾದ ಎಂ.ದಿನೇಶ್ ಹೆಗ್ಡೆ ಮೊಳಹಳ್ಳಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಪ್ರಮುಖರಾದ ಪ್ರವೀಣ್ ಬಲ್ಲಾಳ್ ಹೆಬ್ರಿ ಇದ್ದರು

Leave a Reply