ಕಾಂಗ್ರೆಸ್ ಕಾರ್ಯಕರ್ತರೇ ನಮಗೆ ಪ್ರಬಲ ಮಾಧ್ಯಮ: ಕೆಪಿಸಿಸಿ ಮಾಧ್ಯಮ ವಕ್ತಾರ ಅನಿಲ್

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ವಿಧಾನಸಭಾ ಚುನಾವಣೆಗೂ ಮೊದಲು ಕಾಂಗ್ರೆಸ್ ಪಕ್ಷ ನೀಡಿರುವ ಗ್ಯಾರೆಂಟಿ ಕಾರ್ಡ್ ಇಂದು ಅನುಷ್ಠಾನಕ್ಕೆ ತರಲಾಗಿದೆ. ಇದರಿಂದಾಗಿ ಜನರಲ್ಲಿಯೂ ವಿಶ್ವಾಸ ಮೂಡಿದೆ. ಈ ಭಾರಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವೂ ಗ್ಯಾರೆಂಟಿ ಜಾರಿಗೊಳಿಸುತ್ತಿದ್ದು, ಇದನ್ನು ಜನರಿಗೆ ಮನದಟ್ಟು ಮಾಡುವ ಪ್ರಬಲ ಮಾಧ್ಯಮ ನಮ್ಮ ಕಾರ್ಯಕರ್ತರೇ ಆಗಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಅನಿಲ್ ಹೇಳಿದರು.

Call us

Click Here

ಅವರು ಶನಿವಾರ ಬೈಂದೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ಬಿಡುಗಡೆಗೊಳಿಸಿ ಬಳಿಕ ಮಾತನಾಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅಂದಾಜು 5 ಲಕ್ಷದಷ್ಟು ಕುಟುಂಬ ಫಲಾನುಭವಿಗಳು ಕಾಂಗ್ರೆಸ್ ಗ್ಯಾರೆಂಟಿಯ ಫಲಾನುಭವಿಗಳಾಗಿದ್ದಾರೆ. ಅವರಿಗೆ ಕಾಂಗ್ರೆಸ್ ಸರಕಾರದ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ನೀಡಲಿರುವ ಗ್ಯಾರೆಂಟಿಯನ್ನು ಮನವರಿಕೆ ಮಾಡುವ ಕೆಲಸ ಮಾಡಬೇಕು. ಪ್ರತಿಪಕ್ಷಗಳು ಜನರ ದಾರಿ ತಪ್ಪಿಸುವ ಸಾಧ್ಯತೆ ಇರುವುದರಿಂದ ಪ್ರತಿಯೊಬ್ಬರನ್ನು ಕಾರ್ಯಕರ್ತರು ವೈಯಕ್ತಿಕವಾಗಿ ಭೇಟಿಯಾಗಿ ಮನವರಿಕೆ ಮಾಡುವ ಕೆಲಸ ಮಾಡಬೇಕು ನಿಮ್ಮ ಬೂತ್ ನಿಮ್ಮ ಜವಾಬ್ದಾರಿ ಎಂಬುದನ್ನು ಪ್ರತಿಯೊಬ್ಬ ನಾಯಕರು ಅರಿತು ಕೆಲಸ ಮಾಡಬೇಕಾಗಿದೆ ಎಂದರು.

ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಮಾತನಾಡಿ ರಾಜ್ಯ ಕಂಡ ಅತ್ಯುತ್ತಮ ಮುಖ್ಯಂತ್ರಿಗಳಲ್ಲಿ ಎಸ್. ಬಂಗಾರಪ್ಪನವರು ಓಬ್ಬರು. ಅವರು ನೀಡಿದ ಯೋಜನೆಗಳು ಇಂದಿಗೂ ಜಾರಿಯಲ್ಲಿದೆ. ಸಮಾಜದ ಪ್ರತಿ ವರ್ಗದ ಬಗ್ಗೆಯೂ ಕಾಳಜಿ ಹೊಂದಿದ ಬಂಗಾರಪ್ಪನವರ ಋಣ ಬೈಂದೂರು ಕ್ಷೇತ್ರದ ಮೇಲೆಯೂ ಇದೆ. ಈ ಭಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಗೀತಾ ಶಿವರಾಜಕುಮಾರ್ ಅವರನ್ನು ಆರಿಸಿ ಕಳುಹಿಸುವ ಕೆಲಸ ಮಾಡಬೇಕಾಗಿದೆ ಎಂದರು.

ಕೆಪಿಸಿಸಿ ಕಾರ್ಯದರ್ಶಿ ಜಿ.ಎ. ಬಾವ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಕಾಂಗ್ರೆಸ್ ಮುಖಂಡರುಗಳಾದ ಎಸ್. ರಾಜು ಪೂಜಾರಿ, ಕೆ. ಬಾಬು ಶೆಟ್ಟಿ, ಶಂಕರ ಪೂಜಾರಿ, ಎಸ್. ಮದನ್ ಕುಮಾರ್, ವಿಜಯ ಶೆಟ್ಟಿ, ನಾಗರಾಜ ಗಾಣಿಗ ಬಂಕೇಶ್ವರ, ಸದಾಶಿವ ಪಡುವರಿ, ಶೇಖರ ಪೂಜಾರಿ ಉಪ್ಪುಂದ, ಗೌರಿ ದೇವಾಡಿಗ, ಡಾ. ಸುಬ್ರಹ್ಮಣ್ಯ ಭಟ್, ಪ್ರಸನ್ನ ಶೆಟ್ಟಿ ಶಿರೂರು, ರಘುರಾಮ ಪೂಜಾರಿ ಶಿರೂರು, ವಾಸುದೇವ ಪೂಜಾರಿ ಉಪ್ಪುಂದ, ಗಣೇಶ್‌ ಪೂಜಾರಿ, ನಾಗೇಶ್‌ ಖಾರ್ವಿ, ರಾಮಚಂದ್ರ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

6 + 13 =