Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿರುವುದು ಬಿಜೆಪಿ ಸರಕಾರ: ಬಿ. ವೈ. ರಾಘವೇಂದ್ರ
    ಊರ್ಮನೆ ಸಮಾಚಾರ

    ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿರುವುದು ಬಿಜೆಪಿ ಸರಕಾರ: ಬಿ. ವೈ. ರಾಘವೇಂದ್ರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಕೊಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಜಿ.ಪಂ-ತಾ.ಪಂ ಹಾಗೂ ಗ್ರಾಪಂಗಳಲ್ಲಿ ಮೀಸಲಾತಿ ಕೊಟ್ಟಿದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು.

    Click Here

    Call us

    Click Here

    ತಾಲೂಕಿನ ಕಿರಿಮಂಜೇಶ್ವರದಲ್ಲಿ ಬಿಜೆಪಿ ಬೈಂದೂರು ಮಂಡಲದಿಂದ ನಡೆದ ಶಕ್ತಿಸಿಂಧು – ಬೃಹತ್ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

    ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇ.33ರಷ್ಟು ಸ್ಥಾನ ಹಾಗೂ ರಾಜ್ಯದಲ್ಲಿ ಜಿ.ಪಂ-ತಾಪಂ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಶೇ. 50ರಷ್ಟು ಮೀಸಲಾತಿಯನ್ನು ಮಹಿಳೆಯರಿಗೆ ನೀಡಿದವರು ಪ್ರಧಾನಿ ಮೋದಿ ಹಾಗೂ ಬಿ.ಎಸ್. ಯಡಿಯೂರಪ್ಪನವರು. ಆದರೆ ರಾಜ್ಯ ಸರ್ಕಾರ ಮಹಿಳಾ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಇಂತಹ ಸರ್ಕಾರ ಅಧಿಕಾರದಲ್ಲಿ ಇರಬೇಕಾ ಎಂಬುದನ್ನು ಮತದಾರರು ಯೋಚಿಸಬೇಕಾಗಿದೆ. 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ ಸಿದ್ದರಾಮಯ್ಯನವರು ಇಂದು ಕೇವಲ 5 ಕೆಜಿ ಅಕ್ಕಿ ಕೊಡುತ್ತಿದ್ದಾರೆ. ಇದೂ ಕೇಂದ್ರ ಸರಕಾರದ ನೀಡುತ್ತಿರುವ ಅಕ್ಕಿಯಾಗಿದೆ ಎಂದು ಹೇಳಿದರು.

    ಕಾಂಗ್ರೆಸ್ ಪಕ್ಷ ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುತ್ತಿದೆ. ದೇಶದ ಪ್ರತಿಯೊಬ್ಬ ಹೆಣ್ಣು ಮಗಳಿಗೂ ಪ್ರತಿವರ್ಷ 1 ಲಕ್ಷ ನೀಡುತ್ತೇವೆ ಎಂದು ಹೇಳಿದ್ದಾರೆ. ನಮ್ಮ ದೇಶದಲ್ಲಿ 60 ಲಕ್ಷ ಮಹಿಳೆಯರಿದ್ದಾರೆ. ಅವರೆಲ್ಲರಿಗೂ 1 ಲಕ್ಷ ಹಣ ನೀಡಿದರೆ ಪ್ರತಿ ವರ್ಷ 60 ಲಕ್ಷ ಕೋಟಿ ಹಣ ಬೇಕಾಗುತ್ತದೆ. ಹಾಗಾದರೆ ನಮ್ಮ ದೇಶದ ಬಜೆಟ್ ಇರುವುದೇ 45 ಲಕ್ಷ ಕೋಟಿ ಕುಟುಂಬದ ಓರ್ವ ಹೆಣ್ಣು ಮಗಳಿಗೆ 1 ಲಕ್ಷ ನೀಡಿದರೂ ಸಹ 32 ಲಕ್ಷ ಕೋಟಿ ಹಣ ಬೇಕಾಗುತ್ತದೆ. ಯಾವುದೇ ಅಂಕಿ ಸಂಕಿಯಿಲ್ಲದೇ ಕೇಲವ ಬೊಗಳೆ ಬಿಡುತ್ತಾ ಅಧಿಕಾರವನ್ನು ಹಿಡಿಯುವ ಸಲುವಾಗಿ ಮತದಾರರಿಗೆ ಸಲ್ಲದ ಆಮಿಷಗಳನ್ನು ಒಡ್ಡುತ್ತಿದೆ ಎಂದು ದೂರಿದರು.

    ಮೋದಿ ಸರ್ಕಾರ ಸ್ವಚ್ಚ ಭಾರತ್ ಹೆಸರಿನಲ್ಲಿ ಪ್ರತಿಮನೆಗೆ ಶೌಚಾಲಯ ಜಲಜೀವನ್ ಮಿಷನ್ ಅಡಿಯಲ್ಲಿ ಪ್ರತಿ ಮನೆಗೆ ಕುಡಿಯುವ ನೀರು ಎಲ್.ಪಿ.ಜಿ. ಸಂಪರ್ಕ ಬಡವರಿಗೆ ಮನೆ, ಏಪಿಎಲ್ ಹಾಗೂ ಬಿಪಿಎಲ್ ಕಾರ್ಡ್ದಾರರಿಗೆ ಆಯುಷ್ಮಾನ್ ಕಾರ್ಡ್ ಯೋಜನೆ ನೀಡುವ ಮೂಲಕ ಬಡವರು ಮಧ್ಯಮ ವರ್ಗದವರು ನೆಮ್ಮದಿಯಿಂದ ಜೀವನ ನಡೆಸುವಂತೆ ಮಾಡಿದ್ದಾರೆ ಎಂದರು.

    Click here

    Click here

    Click here

    Call us

    Call us

    ಚಿತ್ರನಟಿ ಹಾಗೂ ಬಿಜೆಪಿ ನಾಯಕಿ ಶೃತಿ ಮಾತನಾಡಿ, ಓಟಿಗಾಗಿ ಬಿಟ್ಟಿ ಭಾಗ್ಯ ನೀಡುತ್ತಿರುವ ರಾಜ್ಯ ಸರ್ಕಾರ ಜನ ಸಾಮಾನ್ಯರನ್ನು ವಂಚಿಸುತ್ತಿದೆ. ಬುಡಕಟ್ಟು ಸಮುದಾಯದಿಂದ ಬಂದಂತಹ ಮಹಿಳೆಯನ್ನು ರಾಷ್ಟ್ರಪತಿಯನ್ನಾಗಿ ಮಾಡಿದ ಹೆಮ್ಮೆ ಬಿಜೆಪಿಯದ್ದು, ಇಂತಹ ಮಹಿಳೆಯ ಬಗ್ಗೆ ಹಾಗೂ ನಮ್ಮ ಪ್ರಧಾನ ಮಂತ್ರಿ ಮೋದಿಯ ಬಗ್ಗೆ ಸಿದ್ದರಾಮಯ್ಯನವರು ಹಗುರವಾಗಿ ಮಾತನಾಡುತ್ತಾರೆ. ಅದೇ ರೀತಿ ಅವರ ಪಕ್ಷದ ಸೋನಿಯಾ ಗಾಂಧಿ ಬಗ್ಗೆ ಹಾಗೂ ರಾಹುಲ್ ಗಾಂಧಿ ಬಗ್ಗೆ ಮಾತನಾಡುತ್ತಾರೆಯೇ? ದೇಶದ ಹಿತಕ್ಕಾಗಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕಾಗಿದೆ ಎಂದರು.

    ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ ಬೈಂದೂರಿನ ಸಮಗ್ರ ಅಭಿವೃದ್ದಿಯಾಗಬೇಕಾದರೆ ಹಾಗೂ ಬೈಂದೂರು ಕ್ಷೇತ್ರ ಒಂದು ಮಾದರಿ ಕ್ಷೇತ್ರವಾಗಬೇಕಾದರೆ ರಾಘಣ್ಣ ಮತ್ತೊಮ್ಮೆ ಸಂಸದರಾಗಲೇಬೇಕು. ಈ ಕ್ಷೇತ್ರ ಜನತೆಗೆ ವಾರಾಹಿಯಿಂದ ಸಿಹಿ ನೀರನ್ನು ಕುಡಿಸುವ ಯೋಜನೆ ಜಾರಿಗಾಗಿ ರಾಘಣ್ಣ ಇನ್ನೊಮ್ಮೆ ಸಂಸತ್ತಿಗೆ ಆಯ್ಕೆಯಾಗಲೇಬೇಕಿದೆ. ಕ್ಷೇತ್ರದ ಮತದಾರರು 1 ಲಕ್ಷಕ್ಕೂ ಅಂತರದ ಮತವನ್ನು ರಾಘಣ್ಣರಿಗೆ ನೀಡಲಿದ್ದಾರೆ ವಿಶ್ವಾಸ ವ್ಯಕ್ತಪಡಿಸಿದರು.

    ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಡಾ. ರಾಜನಂದಿನಿ, ಗಾಯತ್ರಿ ಮಲ್ಲಪ್ಪ, ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಪ್ರಧಾನ ಕಾರ್ಯದರ್ಶಿಗಳಾದ ಮಹೇಂದ್ರ ಪೂಜಾರಿ ಉಮೇಶ್ ಶೆಟ್ಟಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

    ಬೈಂದೂರು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ಯಾಮಲಾ ಕುಂದರ್ ಸ್ವಾಗತಿಸಿ, ಅನಿತಾ ಮರವಂತೆ ವಂದಿಸಿದರು. ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರು ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಫುಲ್ ಮ್ಯಾರಥಾನ್ 42 ಕಿಲೋಮೀಟರ್ ಓಟ: ಎ.ಆರ್.ಎಸ್.ಐ ಶಂಕರ್ ಅವರಿಗೆ ಕಂಚು

    13/01/2026

    ಪೆರಂಪಳ್ಳಿ ಸುಬ್ರಮಣ್ಯ ಹೆಬ್ಬಾರ್ ಅವರಿಗೆ ʼವಿಶ್ವೇಶ ಸೇವಾ ಪ್ರಶಸ್ತಿʼ

    13/01/2026

    ಸಾಲಿಗ್ರಾಮ ಹಬ್ಬ- 2026 ಸಿದ್ಧತಾ ಸಭೆ

    13/01/2026
    Leave A Reply Cancel Reply

    3 × four =

    Call us

    Click Here

    Call us

    Call us

    Call us
    Highest Viewed Recently
    • ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಂಐಟಿಕೆ ವಿದ್ಯಾರ್ಥಿನಿ ಗೀತಾಂಜಲಿ ಸಾಧನೆ
    • ಫುಲ್ ಮ್ಯಾರಥಾನ್ 42 ಕಿಲೋಮೀಟರ್ ಓಟ: ಎ.ಆರ್.ಎಸ್.ಐ ಶಂಕರ್ ಅವರಿಗೆ ಕಂಚು
    • ಪೆರಂಪಳ್ಳಿ ಸುಬ್ರಮಣ್ಯ ಹೆಬ್ಬಾರ್ ಅವರಿಗೆ ʼವಿಶ್ವೇಶ ಸೇವಾ ಪ್ರಶಸ್ತಿʼ
    • ಹಾಲಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ
    • ಸಾಲಿಗ್ರಾಮ ಹಬ್ಬ- 2026 ಸಿದ್ಧತಾ ಸಭೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.