ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಗರದ ಪ್ರಸಿದ್ದ ಹೋಟೆಲ್ ಪಾರಿಜಾತದ ಮಾಲಕ ರಾಮಚಂದ್ರ ಭಟ್ (82 ವರ್ಷ) ಸೋಮವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಳೆದ 50 ವರ್ಷಗಳಿಂದ ಹೊಟೇಲ್ ಉದ್ಯಮವನ್ನು ನಡೆಸುತ್ತಿದ್ದ ರಾಮಚಂದ್ರ ಭಟ್ ಅವರು ಪಾರಿಜಾತ ಭಟ್ರು ಎಂದೇ ಪ್ರಸಿದ್ಧರಾಗಿದ್ದರು.
ಅವರು ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ