ಬಡಗುತಿಟ್ಟಿನ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಎ.25:
ಬಡಗುತಿಟ್ಟಿನ ಯಕ್ಷರಂಗದ ಭಾಗವತ ಶ್ರೇಷ್ಠ ಸುಬ್ರಹ್ಮಣ್ಯ ಧಾರೇಶ್ವರ (67) ಅವರು ಇಂದು ಬೆಳಗ್ಗೆ 4:30ಕ್ಕೆ ಬೆಂಗಳೂರಿನಲ್ಲಿ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

Call us

Click Here

Click here

Click Here

Call us

Visit Now

Click here

ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಸುಬ್ರಹ್ಮಣ್ಯ ಧಾರೇಶ್ವರ ಅವರು ಪೆರ್ಡೂರು ಮೇಳದಲ್ಲಿ ಸುಧೀರ್ಘ 28 ವರ್ಷ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ತೊಡಿಗಿಸಿಕೊಂಡಿದ್ದರು.

1957ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ‌ಮಾಡಿ ಕಾರ್ಯಕ್ರಮ ನೀಡುತ್ತಿದ್ದರು. ನಂತರ ಎಲೆಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆಗೆ ಸೇರಿದ್ದರು. ಮೇಳ ಬಿಟ್ಟು 10 ವರ್ಷದ ಬಳಿಕವೂ ಅನಿವಾರ್ಯ ಸಂದರ್ಭದಲ್ಲಿ ಭಾಗವತರಾಗಿ ಕಲಾ ಸೇವೆ ಮಾಡಿ ಕಲಾವಿದರ ಮನ ಗೆದ್ದಿದ್ದರು. ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು.

ಸಜ್ಜನ, ಸದ್ಗುಣಿ, ಮಿತಭಾಷಿಯಾಗಿದ್ದ ಧಾರೇಶ್ವರರು ಯಕ್ಷಗಾನಕ್ಕೆ ಕಾಳಿಂಗ ನಾವಡರ ಅನಂತರ ಭಾಗವತಿಕೆ ತಾರಾ ಮೌಲ್ಯ ತಂದಿದ್ದರು. ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು. ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳದ ತಿರುಗಾಟ ನಿಲ್ಲಿಸಿದ್ದರು.

ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಧಾರೇಶ್ವರ ಅವರು ಸುಮಾರು 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಧಾರೇಶ್ವರ ಅವರಿಗಿದೆ.

Call us

ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಬೈಂದೂರು ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ.

Leave a Reply

Your email address will not be published. Required fields are marked *

11 − five =