ಕುಂದಾಪುರ: ಮತದಾನ ಜಾಗೃತಿ ಅಭಿಯಾನದ ಅಂಗವಾಗಿ ಪಂಜಿನ ಮೆರವಣಿಗೆ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಉಡುಪಿ ಜಿಲ್ಲಾಡಳಿತ, ಸ್ವೀಪ್ ಸಮಿತಿ ಹಾಗೂ ಕುಂದಾಪುರ ಸ್ವೀಪ್ ಸಮಿತಿ ನೇತೃತ್ವದಲ್ಲಿ ಬುಧವಾರ ಮತದಾನ ಜಾಗೃತಿ ಅಭಿಯಾನದ ಅಂಗವಾಗಿ ಕುಂದಾಪುರದಲ್ಲಿ ಪಂಜಿನ ಮೆರವಣಿಗೆ ಜರುಗಿತು.

Call us

Click Here

Click here

Click Here

Call us

Visit Now

Click here

ಕುಂದಾಪುರ ತಾಲೂಕು ಪಂಚಾಯತ್ ಆವರಣದಲ್ಲಿ ಪಂಜಿನ ಮೆರವಣಿಗೆಗೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶಶಿಧರ್ ಚಾಲನೆ ನೀಡಿದರು. ಈ ವೇಳೆ ಅವರು ಮಾತನಾಡಿ ಪ್ರತಿಯೊಬ್ಬ ನಾಗರಿಕನೂ ತಪ್ಪದೇ ಮತದಾನದಲ್ಲಿ ಪಾಲ್ಗೊಳ್ಳಬೇಕು. ಅದಕ್ಕಾಗಿ ಸಾಕಷ್ಟು ಮತದಾನ ಜಾಗೃತಿ ಮೂಡಿಸಲಾಗಿದೆ. ಮತಗಟ್ಟೆಗಳಲ್ಲಿ ಕನಿಷ್ಟ ಸೌಲಭ್ಯವಿರುವಂತೆ ನೋಡಿಕೊಳ್ಳಲಾಗಿದೆ. ಮಹಿಳೆಯರು, ವಿಕಲಚೇತನರು ಹಾಗೂ ಯುವ ಸಮುದಾಯವನ್ನು ಮತಗಟ್ಟೆಯತ್ತ ಆಕರ್ಷಿಸಲು ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ 17 ವಿಶೇಷ ಮತಗಟ್ಟೆಗಳನ್ನು ಮಾಡಲಾಗಿದೆ ಎಂದರು.

ತಾಲೂಕು ಪಂಚಾಯತಿ ಆವರಣದಿಂದ ಕುಂದಾಪುರ ಶಾಸ್ತ್ರೀ ವೃತ್ತದ ತನಕ ಅಧಿಕಾರಿಗಳು ಹಾಗೂ ಕಾಲೇಜು ಹಾಸ್ಟೆಲ್ ವಿದ್ಯಾರ್ಥಿಗಳಿಂದ ಪಂಜಿನ ಮೆರವಣಿಗೆ ಜರುಗಿತು. ಕುಂದಾಪುರ ಶಾಸ್ತ್ರೀ ವೃತ್ತದಲ್ಲಿ ಮೊಂಬತ್ತಿಯನ್ನು ಬೆಳಗಿ, ಪ್ಲೈಓವರ್ ಮೇಲ್ಭಾಗದಲ್ಲಿ ಪಂಜುಗಳನ್ನು ಪ್ರದರ್ಶಿಸಿ ಜಾಗೃತಿ ಮೂಡಿಸಲಾಯಿತು.

ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ಪ್ರೆಮಾನಂದ, ಮೆಸ್ಕಾಂ ಎಇಇ ವಿಜಯ ಕುಮಾರ್, ಬಿಸಿಎಂ ಇಲಾಖೆಯ ವೀಣಾ ನಾಯ್ಕ್, ಪುರಸಭೆ ಮುಖ್ಯಾಧಿಕಾರಿ ಮುಂಜುನಾಥ್, ತಾಲೂಕು ಸ್ವೀಪ್ ಸಮಿತಿಯಚಂದ್ರಕಾಂತ್ ಬಿಲ್ಲವ, ಪಿಡಿಓಗಳ ಸಂಘ ಅಧ್ಯಕ್ಷ ಚಂದ್ರ ಬಿಲ್ಲವ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

14 − 6 =