Kundapra.com ಕುಂದಾಪ್ರ ಡಾಟ್ ಕಾಂ

ಕೊರ್ಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಮತದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆಗಳು ಬೆಳಿಗ್ಗೆಯಿಂದ ಆರಂಭಗೊಂಡಿದ್ದು, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಕೊರ್ಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಮಾಡಿದರು.

ಸಹೋದರಿಯರಾದ ಸರೋಜಿನಿ ಹೆಗ್ಡೆ ಹಾಗೂ ಶಶಿಕಲಾ ಹೆಗ್ಡೆ ಅವರೊಂದಿಗೆ ಮತಗಟ್ಟೆಗೆ ಆಗಮಿಸಿದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ಮತದಾನದ ಬಳಿಕ ಅವರು ಪ್ರತಿಕ್ರಿಯಿಸಿ, ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ವಾತಾವರಣವಿದ್ದು, ಗೆಲ್ಲುವ ನಿರೀಕ್ಷೆ ಇದೆ. ಮತದಾರರು ಬೆಂಬಲಿಸುತ್ತಿರುವುದು ಗೆಲುವಿನ ವಿಶ್ವಾಸ ಹೆಚ್ಚಿಸಿದೆ ಎಂದರು.

Exit mobile version