ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆಗಳು ಬೆಳಿಗ್ಗೆಯಿಂದ ಆರಂಭಗೊಂಡಿದ್ದು, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಕೋಟತಟ್ಟು ಗ್ರಾಮ ಪಂಚಾಯತ್ ಮತಗಟ್ಟೆಯಲ್ಲಿ ಸರತಿಸಾಲಿನಲ್ಲಿ ನಿಂತು ಮತದಾನ ಮಾಡಿದರು.
ಕೋಟ ಶ್ರೀನಿವಾಸ ಪೂಜಾರಿ, ಪತ್ನಿ ಶಾಂತ ಹಾಗೂ ಪುತ್ರಿ ಶ್ರುತಿ ಅವರೊಂದಿಗೆ ಮತಗಟ್ಟೆಗೆ ತೆರಳಿ ಬೆಳಿಗ್ಗೆ 7.30 ಗಂಟೆಗೆ ಮತದಾನ ಮಾಡಿದರು.
ಮತದಾನದ ಬಳಿಕ ಸುದ್ದಿಗಾರರಿಗೆ ಅವರು ಪ್ರತಿಕ್ರಿಯಿಸಿ, ದೇಶದ ಐಕ್ಯತೆ ಮತ್ತು ಭದ್ರತೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ. ಅಧಿಕ ಸಂಖ್ಯೆಯಲ್ಲಿ ಮತದಾರರು ನನ್ನ ಕೈ ಹಿಡಿಯುತ್ತಾರೆ ಎಂಬ ಭರವಸೆ ಇದೆ ಎಂದರು.