ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 586 ಅಂಕ ಗಳಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪೂರ್ವಿ ಆರ್. ಚಿತ್ತಾಲ್ ಅವರನ್ನು ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಗೌರವಿಸಲಾಯಿತು.
ಗಂಗೊಳ್ಳಿಯ ಎಸ್.ವಿ.ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಎಂ. ನಾಗೇಂದ್ರ ಪೈ ವಹಿಸಿದ್ದರು. ಗಂಗೊಳ್ಳಿ ರೋಟರಿ ಕ್ಲಬ್ನ ಮಾಜಿ ಅಧ್ಯಕ್ಷರಾದ ಉದಯಶಂಕರ ರಾವ್, ಜನಾರ್ದನ ಪೂಜಾರಿ ಪೆರಾಜೆ, ಉಮೇಶ ಮೇಸ್ತ ಹಾಗೂ ದಯಾನಂದ ಗಾಣಿಗ ಅವರು ಪೂರ್ವಿ ಚಿತ್ತಾಲ್ ಅವರನ್ನು ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಗೌರವಿಸಿದರು.
ಗಂಗೊಳ್ಳಿ ರೋಟರಿ ಕಾರ್ಯದರ್ಶಿ ಕೃಷ್ಣ ಪೂಜಾರಿ, ಕ್ಲಬ್ನ ನಿಕಟಪೂರ್ವ ಅಧ್ಯಕ್ಷ ಕೆ. ರಾಮನಾಥ ನಾಯಕ್, ವಾಸುದೇವ ಶೇರುಗಾರ್, ನಾರಾಯಣ ಇ. ನಾಯ್ಕ್, ರೋಟರಿ ಸದಸ್ಯರಾದ ರಾಮನಾಥ ಚಿತ್ತಾಲ್, ಟಿ.ದಿನಕರ ಶೆಣೈ, ಆನಂದ ಕೆ., ಮಾಲಾಶ್ರೀ, ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ರೇಶ್ಮಾ ಚಿತ್ತಾಲ್ ಮೊದಲಾದವರು ಉಪಸ್ಥಿತರಿದ್ದರು.