Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಿರಿಯ ಯಕ್ಷಗಾನ ಕಲಾವಿದ ಮಾರ್ಗೋಳಿ ಗೋವಿಂದ ಶೇರುಗಾರರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
    Recent post

    ಹಿರಿಯ ಯಕ್ಷಗಾನ ಕಲಾವಿದ ಮಾರ್ಗೋಳಿ ಗೋವಿಂದ ಶೇರುಗಾರರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಬಡಗುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ, ಸ್ತ್ರೀಪಾತ್ರಗಳ ಮೂಲಕ ತನ್ನ ಕಲಾವರ್ಚಸ್ಸನ್ನು ಅಸಂಖ್ಯ ಯಕ್ಷಪ್ರೀಯರಿಗೆ ಉಣಬಡಿಸಿದ ಕಲಾವಿದ ಕುಂದಾಪುರ ತಾಲೂಕಿನ ಮಾರ್ಗೋಳಿ ಗೋವಿಂದ ಶೇರುಗಾರ್ ಅವರಿಗೆ 2015ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ.

    Click Here

    Call us

    Click Here

    ಮಾರ್ಗೋಳಿ ಅವರ ಬದುಕಿನ ಸುತ್ತ:
    ಐವತ್ತು ವರುಷಗಳ ರಂಗ ಬದುಕಿನಲ್ಲಿ ತೆಂಕು-ಬಡಗಿನುದ್ದಕ್ಕೂ ತಿರುಗಾಟ ಮಾಡಿದ ಮಾರ್ಗೋಳಿಯವರು ಬಡಗು ತಿಟ್ಟಿನ ಪ್ರಾತಿನಿಧಿಕ ಕಲಾವಿದ. ಬಡಗಿನ ಹಳೆಯ ಕ್ರಮಗಳ ಬಗ್ಗೆ ಅಧಿಕೃತ ದನಿ. ನಾಟ್ಯದಿಂದ ರಂಗಸೂಕ್ಷ್ಮದ ವರೆಗಿನ ಸಂಗತಿಗಳಿಗೆ ಈ ಕಾಲಘಟ್ಟದಲ್ಲಿ ಮಾರ್ಗೋಳಿಯವರು ಯಕ್ಷಗಾನಕ್ಕೆ ಅನಿವಾರ್ಯ. ತನ್ನ ಹದಿಮೂರನೇ ವರುಷದಿಂದ ಬಣ್ಣದ ಬದುಕು ಆರಂಭ. ಕುಂದಾಪುರದ ಬಸ್ರೂರಿನಲ್ಲಿ ನಾಲ್ಕನೇ ತರಗತಿ ತನಕ ವಿದ್ಯಾಭ್ಯಾಸ. ಬದುಕಿನ ಅನಿವಾರ್ಯತೆಯೊಂದಿಗೆ ಬೆಳೆದು, ಬಡಗುತಿಟ್ಟಿನ ಬಹುತೇಕ ಖ್ಯಾತರೊಡನೆ ಪಾತ್ರವಹಿಸಿ, ತಾನೂ ಗಟ್ಟಿಯಾಗಿ ರಂಗದ ಸಾರಸರ್ವಸ್ವವನ್ನುಂಡ ಅಪರೂಪದ ಕಲಾಗಾರಿಕೆ. ಅವರ ರಂಗ ಬದುಕಿನ ಉಚ್ಛ್ರಾಯ ಕಾಲದ ನೆನಪು ಅವರ ಇಳಿವಯಸ್ಸಿನ ಲವಲವಿಕೆಯ ಗುಟ್ಟು.

    ಗುರು ವೀರಭದ್ರ ನಾಯಕ್, ಕೊಕ್ಕರ್ಣೆ ಗುಂಡು ನಾಯಕ್, ನರಸಿಂಹ ಕಮ್ತಿ.. ಮೊದಲಾದ ಆಢ್ಯರ ಗರಡಿಯಲ್ಲಿ ತಿದ್ದಿ-ತೀಡಿದ ಅಪ್ಪಟ ಪ್ರತಿಭೆ. ತೆಂಕುಟ್ಟಿನಲ್ಲಿ ಪ್ರಸಿದ್ಧವಾದ ‘ದೇವಿ ಮಹಾತ್ಮೆ’ ಪ್ರಸಂಗದ ‘ಶ್ರೀದೇವಿ’ ಪಾತ್ರಕ್ಕೆ ಬಡಗಿನ ರಂಗದಲ್ಲಿ ಜೀವತುಂಬಿ, ಅದಕ್ಕೆ ಪ್ರತ್ಯೇಕವಾದ ಎತ್ತರದ ಸ್ಥಾನ ರೂಪಿಸಿದ ಕೀರ್ತಿ ಮಾರ್ಗೋಳಿಯವರಿಗೆ ಸಲ್ಲಬೇಕು.

    ಮಂದಾರ್ತಿ ಮೇಳದಿಂದ ತಿರುಗಾಟ (1939)ಆರಂಭ. ಮುಂದೆ ಸೌಕೂರು, ಸಾಲಿಗ್ರಾಮ, ಇಡಗುಂಜಿ, ಪೆರ್ಡೂರು, ಅಮೃತೇಶ್ವರೀ, ಕಮಲಶಿಲೆ, ಕೂಡ್ಲು, ಮಾರಣಕಟ್ಟೆ ಮೇಳಗಳಲ್ಲಿ ತಿರುಗಾಟ. ಈ ಮಧ್ಯೆ ಅಮೃತೇಶ್ವರಿ ಮೇಳದ ಯಜಮಾನಿಕೆ ಮಾಡಿದ ಅನುಭವ. ‘ಮಾರಣಕಟ್ಟೆ ಮೇಳವೊಂದರಲ್ಲೇ ಮೂವತ್ತಾರು ತಿರುಗಾಟ ಮಾಡಿದ್ದೇನೆ’ ಎನ್ನುತ್ತಾ, ಮೇಳದ ತಿರುಗಾಟದ ರಸನಿಮಿಷಗಳನ್ನು ಹಂಚಿಕೊಳ್ಳುತ್ತಾರೆ.

    Margoli Govinda Sherugar  Yakshagana - Kannada rojyotsava award1ಏರುಜವ್ವನದದ ಇವರ ಸ್ತ್ರೀಸಹಜ ಒನಪು-ಒಯ್ಯಾರಗಳ ಪಾತ್ರಗಳನ್ನು ಈಗಲೂ ಹಿರಿಯರು ಜ್ಞಾಪಿಸಿಕೊಳ್ಳುತ್ತಾರೆ. ನಾಲ್ಕೈದು ದಶಕದ ಹಿಂದೆ ಕುಂಬಳೆಯಲ್ಲಿ ಜರುಗಿದ ‘ಪಂಚವಟಿ’ ಪ್ರಸಂಗದ ‘ಮಾಯಾಶೂರ್ಪನಖಿ’ಯ ಪಾತ್ರವನ್ನು ರಂಗದಲ್ಲಿ ಬಿಡಿ, ಚೌಕಿಯಲ್ಲೇ ನೋಡಲು ಜನ ಮುಗಿಬೀಳುತ್ತಿದ್ದರಂತೆ. ಚೌಕಿಯಿಂದ ರಂಗಸ್ಥಳಕ್ಕೆ ಹೋಗುವ ದಾರಿಯ ಇಕ್ಕೆಡೆಯಲ್ಲೂ ಇವರಿಗೆ ರಕ್ಷಣೆ ಒದಗಿಸಬೇಕಾದ ಪ್ರಸಂಗ ಬಂದಿತಂತೆ. ಈ ಘಟನೆ ಹೇಳುವಾಗ 86ರ ಮಾರ್ಗೋಳಿಯರು ನಾಚಿ ನೀರಾಗಿ 24ರ ಯುವಕರಾಗುತ್ತಾರೆ!

    Click here

    Click here

    Click here

    Call us

    Call us

    ಮಾರ್ಗೋಳಿಯವರ ಕಸೆ ಸ್ತ್ರೀಪಾತ್ರಗಳಲ್ಲಿ ಪ್ರತ್ಯೇಕವಾದ ಛಾಪು. ‘ಮೀನಾಕ್ಷಿ’ ಮೆಚ್ಚಿನ ಪಾತ್ರ. ಶಶಿಪ್ರಭೆ, ಭ್ರಮರಕುಂತಳೆ, ಚಿತ್ರಾಂಗದೆ, ಚಿತ್ರಲೇಖೆ ಹೀಗೆ ಅನೇಕ ಪಾತ್ರಗಳ ಶಿಲ್ಪ ಎಂದೂ ಮಾಸದು! ದೇಹ ಮಾಗುತ್ತಿದ್ದಾಗ ‘ನನ್ನ ಸ್ತ್ರೀಪಾತ್ರ ಇನ್ನು ಸಾಕು’ ಎಂದು ಕಂಡದ್ದೇ ತಡ, ಪುರುಷ ಪಾತ್ರಗಳ ನಿರ್ವಹಣೆ. ರಾಮ, ಕೃಷ್ಣ, ಅರ್ಜುನ, ಸುಧನ್ವ, ತಾಮ್ರಧ್ವಜ, ಕಮಲಭೂಪ.. ಪಾತ್ರಗಳ ನಿರ್ವಹಣೆ. ಪಾತ್ರಗಳನ್ನು ನಿರ್ವಹಿಸಿ, ಪ1986ರಿಂದ ರಂಗನಿವೃತ್ತಿ. ಎಂಟು ವರುಷ ಮಹಿಳೆಯರಿಗೆ ತರಬೇತಿ ನೀಡಿ ತನ್ನದೇ ಆದ ಯಕ್ಷತಂಡವನ್ನು ರೂಪಿಸಿದ್ದರು.

    ‘ಸ್ತ್ರೀವೇಷಧಾರಿಯಾದವನು ಭಾವಜೀವಿಯಾಗಿರಬೇಕು. ಜೀವನವನ್ನು ಅತ್ಯಂತ ಸೂಕ್ಷ್ಮವಾಗಿ ಅನುಭವಿಸುವವರಿಗೆ, ಗಮನಿಸುವವರಿಗೆ ಹೆಚ್ಚಿಗೆ ಒಲಿಯುತ್ತದೆ’ ಎನ್ನುತ್ತಾರೆ. ಹದಿನೆಂಟು ದಿವಸದ ಮಹಾಭಾರತ, ಹನ್ನೆರಡು ದಿವಸದ ರಾಮಾಯಣ ಪ್ರಸಂಗಗಳ ಪ್ರದರ್ಶನಗಳನ್ನು ನೆನಪಿಸಿಕೊಳ್ಳುವಾಗ ಭಾವುಕರಾಗುತ್ತಾರೆ. (ಕುಂದಾಪ್ರ ಡಾಟ್ ಕಾಂ ಸುದ್ದಿ)

    ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಬೆಂಗಳೂರಿನ ‘ಕಲಾಶ್ರೀ ಪ್ರಶಸ್ತಿ’, ‘ಯಕ್ಷ ಸವ್ಯಸಾಚಿ’, ‘ರಂಗಸ್ಥಳದ ರಾಣಿ’ ಪುರಸ್ಕಾರ, ‘ಪಾತಾಳ ಪ್ರಶಸ್ತಿ’. ಸಾಲಿಗ್ರಾಮ ಮೇಳದ ಯಜಮಾನರಾಗಿದ್ದ ದಿ.ಪಳ್ಳಿ ಸೋಮನಾಥ ಹೆಗ್ಡೆಯವರ ಹೆಸರಿನಲ್ಲಿ ನೀಡುವ ‘ಪಳ್ಳಿ ಸೋಮನಾಥ ಹೆಗ್ಡೆ ಪ್ರಶಸ್ತಿ’ಗೆ ಸೇರಿದಂತೆ ಹತ್ತಾರು ಗೌರವ ಪುರಸ್ಕಾರಗಳು ಮಾರ್ಗೋಳಿ ಅವರ ಮುಡಿಗೇರಿದೆ.

    Like this:

    Like Loading...

    Related

    Yakshagana
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು

    05/12/2025

    ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d