ದ್ವಿತೀಯ ಪಿಯು ಮರು ಮೌಲ್ಯಮಾಪನ: ಕುಂದಾಪುರದ ಎಕ್ಸಲೆಂಟ್‌ಗೆ ಇನ್ನೆರಡು ರ‍್ಯಾಂಕ್

Click Here

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ದ್ವಿತೀಯ ಪಿಯುಸಿ ಮರು ಮೌಲ್ಯಮಾಪನದಲ್ಲಿ ಕುಂದಾಪುರದ ಎಕ್ಸಲೆಂಟ್ ಕಾಲೇಜಿನ ವಾಣಿಜ್ಯ ವಿಭಾಗದ ಅಭಿಷೇಕ್ ಅಡಿಗ 592 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ರ‍್ಯಾಂಕ್ ಪಡೆದರೆ, ವಿಜ್ಞಾನ ವಿಭಾಗದ ಸನ್ನಿಧಿ ಕುಲಾಲ್ 591 ಅಂಕಗಳೊAದಿಗೆ ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.

Click Here

Call us

Click Here

ಪರೀಕ್ಷೆಗೆ ಹಾಜರಾದ 404 ವಿದ್ಯಾರ್ಥಿಗಳೆಲ್ಲರೂ ಉತ್ತೀರ್ಣರಾಗುವ ಮೂಲಕ ಕಾಲೇಜಿಗೆ ಶೇಕಡ 100 ಫಲಿತಾಂಶ ಲಭಿಸಿದೆ. ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಲ್ಲಿ 14 ವಿದ್ಯಾರ್ಥಿಗಳು 588 ಕ್ಕಿಂತಲೂ ಅಧಿಕ ಅಂಕಗಳನ್ನು ಗಳಿಸುವುದರ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಒಟ್ಟು 404 ವಿದ್ಯಾರ್ಥಿಗಳಲ್ಲಿ ಶೇ.95 ಕ್ಕಿಂತಲೂ ಅಧಿಕ ಅಂಕಗಳನ್ನು 86 ವಿದ್ಯಾರ್ಥಿಗಳು ಗಳಿಸಿದರೆ, 308 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದುವುದರ ಮೂಲಕ ಕಾಲೇಜಿಗೆ ಹೆಮ್ಮೆ ತಂದಿದ್ದಾರೆ.

ವಿದ್ಯಾರ್ಥಿಗಳ ಈ ವಿಶೇಷ ಸಾಧನೆಯನ್ನು ಎಂ.ಎಂ. ಹೆಗ್ಡೆ ಎಜುಕೇಶನಲ್ ಹಾಗೂ ಚಾರಿಟೇಬಲ್ ಟ್ರಸ್ಟ್ (ರಿ.)ನ ಅಧ್ಯಕ್ಷರಾಗಿರುವ ಎಂ. ಮಹೇಶ್ ಹೆಗ್ಡೆ ಹಾಗೂ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾಗಿರುವ ಡಾ. ರಮೇಶ್ ಶೆಟ್ಟಿ, ಕರ‍್ಯದರ್ಶಿ ಪ್ರತಾಪಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಉಪನ್ಯಾಸಕ ವೃಂದದವರು ಶ್ಲಾಘಿಸಿ ಅಭಿನಂದಿಸಿದ್ದಾರೆ.

Leave a Reply