ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬದುಕು, ಬೆಲೆ ಏರಿಕೆ, ರೈತ, ಹೆಣ್ಣು ಮಕ್ಕಳ ಮಾನಹರಣ, ದೇಶದ ಸಮಸ್ಯೆಗಳ ಬಗ್ಗೆ ಮಾತನಾಡಬೇಕಿದ್ದ ದೇಶದ ಪ್ರಧಾನಿಗಳು ಯಾವುದೋ ನಾಯಕ ಮೀನು ತಿನ್ನುವುದನ್ನೇ ದೊಡ್ಡ ವಿಷಯವನ್ನಾಗಿಸಿ ವ್ಯಂಗ್ಯವಾಡುತ್ತಿದ್ದಾರೆ ನಿಕೇತರಾಜ್ ಮೌರ್ಯ ಹೇಳಿದರು.
ಅವರು ಮಂಗಳವಾರ ಕಿರಿಮಂಜೇಶ್ವರದಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಿವಮೋಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ ಪರ ಆಯೋಜಿಸಲಾದ್ದ ಮಹಿಳಾ ಸಮಾವೇಶ ಉದ್ದೇಶಿಸಿ ಮಾತನಾಡಿದರು.
ಅಂಬೇಡ್ಕರ್ ಅವರ ಶೋಷಿತರು, ಬಡವರು ದೇಶದ ಜನರ ಉಳಿವಿಗಾಗಿ ನೀಡಿದ ಸಂವಿಧಾನವನ್ನೇ ಬದಲಿಸಲು ಹೊರಟಿರುವ ಬಿಜೆಪಿಯನ್ನು ತಿರಸ್ಕರಿಸಿ ಜನರ ಬದುಕು ಕಟ್ಟಿದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದರು.
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ ಕುಮಾರ್ ಅವರು ಮಾತನಾಡಿ, ದೇಶದಲ್ಲಿ ಮಹಿಳೆಯರಿಗೆ ಮೊದಲ ಭಾರಿಗೆ ಮೀಸಲಾತಿ ನೀಡಿ ಧ್ವನಿ ನೀಡಿದ್ದು, ದೇಶದ ಜನರ ಬದುಕು ಕಟ್ಟಿದ ಕಾಂಗ್ರೆಸ್ ಪಕ್ಷ. ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ದೇಶದಲ್ಲಿ ಐಎನ್ಡಿಐಎ ಅಧಿಕಾರಕ್ಕೆ ಬಂದರೆ ದೇಶದಲ್ಲಿಯೂ ಕಾಂಗ್ರೆಸ್ ಗ್ಯಾರೆಂಟ್ ಅನುಷ್ಠಾನಕ್ಕೆ ಬರಲಿದೆ ಎಂದರು.
ನಟ ದುನಿಯಾ ವಿಜಿ ಮಾತನಾಡಿಬಿಜೆಪಿ ದೇಶದಲ್ಲಿ ಹಿಂದೂ ಮುಸಲ್ಮಾನ ಎಂದು ಬೇರೆ ಮಾಡುತ್ತಲೇ ಇರುತ್ತಾರೆ. ನಮ್ಮಲ್ಲಿಯೇ ಒಡಕು ತಂದು ಬೆಳೆ ಬೆಯಿಸಿಕೊಳ್ಳಲು ಅವರು ಕಾಯುತ್ತಿದ್ದಾರೆ. ನಾವು ಒಗ್ಗಟ್ಟಾಗಿ ಕಾಂಗ್ರೆಸ್ ಬೆಂಬಲಿಸುವುದು ಬಹುಮುಖ್ಯವಾಗಿದೆ ಎಂದರು.
ಶೃಂಗೇರಿ ಶಾಸಕ ರಾಜೇಗೌಡ, ಬೈಂದೂರು ಮಾಜಿ ಶಾಸಕರುಗಳಾದ ಕೆ. ಗೋಪಾಲ ಪೂಜಾರಿ, ಬಿ. ಎಂ. ಸುಕುಮಾರ ಶೆಟ್ಟಿ, ಮೂಡಿಗೆರೆ ಮಾಜಿ ಶಾಸಕ ನಿಂಗಯ್ಯ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡರುಗಳಾದ ಕೆ. ಜಯಪ್ರಕಾಶ್ ಹೆಗ್ಡೆ, ಮುನಿಯಲ್ ಉದಯಕುಮಾರ್ ಶೆಟ್ಟಿ, ಎಸ್. ರಾಜು ಪೂಜಾರಿ, ರಘುರಾಮ ಶೆಟ್ಟಿ, ಬೈಂದೂರು ಕ್ಷೇತ್ರದ ಉಸ್ತುವಾರಿ ಜಿ.ಎ. ಭಾವ, ಮಾಧ್ಯಮ ವಕ್ತಾರ ಅನಿಲ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಿ ದೇವಾಡಿಗ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಿ ದೇವಾಡಿಗ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಿ ದೇವಾಡಿಗ, ಜಗದೀಶ ದೇವಾಡಿಗ, ಸುಬ್ರಹ್ಮಣ್ಯ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಡಾ. ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರೂಪಿಸಿದರು.